LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದೇಶಕ್ಕೆ ತೆರಳಲು ಯತ್ನ: ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ವಶಕ್ಕೆ

ಬೆಳಗಾವಿ, ನ. 21: ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪ ಎದುರಿಸುತ್ತಿರುವ ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ಅವರನ್ನು ಶನಿವಾರ ಕೇರಳದ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ದುಬೈಗೆ ತೆರಳಲು ಮುಂದಾಗಿದ್ದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಅವರನ್ನು ತಡೆದಿದ್ದಾರೆ.

ಬೆಳಗಾವಿ ಹಾಗೂ ಬೆಂಗಳೂರು ಪೊಲೀಸರು ಜಾರಿಗೊಳಿಸಿದ್ದ ಲುಕ್‌ಔಟ್ ನೋಟಿಸ್ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ರವಿ ಹಂಜ್ ಅವರನ್ನು ವಶಕ್ಕೆ ಪಡೆದಿರುವುದನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ ಅಲ್ಲ, ಪ್ರಕಾಶ ನಿಕಂ ಖಚಿತಪಡಿಸಿದ್ದಾರೆ.

‘ರವಿ ಹಂಜ್ ವಿರುದ್ಧ ಬೆಳಗಾವಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದರು. ಅದರ ಆಧಾರದಲ್ಲಿ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ರವಿ ಹಂಜ್ ಅವರನ್ನು ತಡೆದ ಬಳಿಕ ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅವರನ್ನು ಕರ್ನಾಟಕ ಪೊಲೀಸರ ವಶಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸಂಬಂಧ ಬೆಂಗಳೂರು ಪೊಲೀಸರ ತಂಡ ಕೊಚ್ಚಿನ್‌ಗೆ ತೆರಳಲು ಸಿದ್ಧತೆ ನಡೆಸಿದೆ. ಬೆಳಗಾವಿ ಪೊಲೀಸರು ಕೂಡ ಮುಂದಿನ ಕಾನೂನು ಕ್ರಮಗಳಿಗೆ ಮುಂದಾಗಿದ್ದಾರೆ.

ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಹಿನ್ನೆಲೆಯಲ್ಲಿ ರವಿ ಹಂಜ್ ವಿರುದ್ಧ ಬೆಳಗಾವಿ, ಬೆಂಗಳೂರು, ವಿಜಯಪುರ ಹಾಗೂ ಬಸವನ ಬಾಗೇವಾಡಿಯಲ್ಲಿ ಕನಿಷ್ಠ 4 ಎಫ್‌ಐಆರ್‌ಗಳು ದಾಖಲಾಗಿವೆ.

ವಿವಾದಾತ್ಮಕ ಕೃತಿಯ ಪ್ರಕಾಶಕ ಹಾಗೂ ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಕೃತಿಯಲ್ಲಿನ ಅಂಶಗಳು ಬಸವಣ್ಣನವರ ವ್ಯಕ್ತಿತ್ವ ಹಾಗೂ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಎಂಬುದು ದೂರುದಾರರ ಆರೋಪವಾಗಿದೆ.

ರವಿ ಹಂಜ್ ಅವರನ್ನು ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವುದು ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅವರನ್ನು ಕರ್ನಾಟಕಕ್ಕೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಅಧಿಕೃತ ಬಂಧನ ಹಾಗೂ ಮುಂದಿನ ಕಾನೂನು ಕ್ರಮಗಳ ಕುರಿತು ಪೊಲೀಸರಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST