LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸುವರ್ಣ ಮಂದಿರ ಬಾಗಿಲ ಬಳಿ ಬಾದಲ್‌ ಹತ್ಯೆ ಯತ್ನ

ಅಮೃತಸರ: ಪಂಜಾಬ್‌ ಮಾಜಿ ಉಪಮುಖ್ಯಮಂತ್ರಿ ಸುಖಬೀರ‌ ಸಿಂಗ್‌ ಬಾದಲ್‌ ಅವರನ್ನು ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈಯಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ.



ಸಿಖ್ ಧಾರ್ಮಿಕ ಸಂಸ್ಥೆ ಅಕಾಲ‌ ತಖ್ತನಿಂದ ಧರ್ಮದ್ರೋಹಕ್ಕಾಗಿ ಶಿಕ್ಷಿತರಾಗಿರುವ ಸುಖಬೀರ‌ ಸಿಂಗ್‌ ಬಾದಲ್‌ ಅವರನ್ನು ಗುರಿಯಾಗಿರಿಸಿ ಖಲಿಸ್ಥಾನ್ ಬೆಂಬಲಿಗ ನಾರಾಯಣ ಸಿಂಗ್ ಎಂದು ಹೇಳಲಾದ ದುಷ್ಕರ್ಮಿ ಗುಂಡು ಹಾರಿಸಿ ಹತ್ಯೆ ಮಾಡಲು ಯತ್ನಿಸಿದ. ಬಾದಲ್ ಪಾರಾಗಿದ್ದು ಸ್ಥಳದಲ್ಲಿದ್ದವರು ದುಷ್ಕರ್ಮಿಯನ್ನು ತಡೆದಿದ್ದಾರೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ.



ಸುಖಬೀರ‌ ಸಿಂಗ್‌ ಬಾದಲ್‌ ತಮ್ಮ ಶಿಕ್ಷೆಯನ್ನು ಮಂಗಳವಾರದಿಂದ ಸ್ವೀಕರಿಸಲು ಪ್ರಾರಂಭಿಸಿದ್ದರು. ಕುತ್ತಿಗೆಗೆ ಫ‌ಲಕ, ಕೈಯಲ್ಲಿ ಈಟಿ ಹಿಡಿದ ಸುಖ್ಬೀರ್‌ ಸಿಂಗ್‌, ತಮ್ಮ ಗಾಲಿ ಕುರ್ಚಿಯಲ್ಲಿ ಕುಳಿತೇ ಅಮೃತಸರದ ಸ್ವರ್ಣ ಮಂದಿರದ ಪ್ರವೇಶದ್ವಾರದ ಸೇವಾದಾರನ ವೃತ್ತಿ ನಿಭಾಯಿಸುತ್ತಿದ್ದರು.



ಸ್ಥಳಕ್ಕೆ ಹೆಚ್ಚುವರಿ ಪೊಲೀಸರು ದೌಡಾಯಿಸಿದ್ದು, ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ.



ಮತ್ತೋರ್ವ ಅಕಾಲಿ ದಳ ನಾಯಕ ಬಿಕ್ರಮ್‌ ಸಿಂಗ್‌ ಮಜೀಠಿಯಾ ಕೂಡ ಗುರುದ್ವಾರದ ಪಾತ್ರೆಗಳನ್ನು ತೊಳೆಯುವ ಮೂಲಕ ಶಿಕ್ಷೆಯನ್ನು ಪ್ರಾರಂಭಿಸಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ