LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಬಿಜೆಪಿ ಶಾಸಕನಿಗೆ ಜಾಮೀನು; ತೆಲಂಗಾಣದಲ್ಲಿ ಭಾರಿ ಪ್ರತಿಭಟನೆ

ಹೈದರಾಬಾದ : ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್​​ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಮುಸ್ಲಿಂ ಸಮುದಾಯದ ಆಕ್ರೋಶ ಮುಗಿಲುಮುಟ್ಟಿದೆ. ರಾಜಾ ಸಿಂಗ್​​ಗೆ ಜಾಮೀನು ಸಿಕ್ಕಿರುವುದನ್ನು ವಿರೋಧಿಸಿ ರಾತ್ರಿಯಿಡೀ ಪ್ರತಿಭಟನೆ ನಡೆಸಲಾಗಿದೆ.



ಪ್ರತಿಭಟನೆಯ ಸಂದರ್ಭದಲ್ಲಿ ತಲೆಯನ್ನು ದೇಹದಿಂದ ಬೇರ್ಪಡಿಸಿ ಎಂಬ ಘೋಷಣೆಗಳು ಮೊಳಗುತ್ತಲೇ ಇದ್ದವು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸಾಕಷ್ಟು ಯತ್ನಿಸಿದರು. ಈ ಸಂದರ್ಭದಲ್ಲಿ ಸಬ್​ ಇನ್​ಸ್ಪೆಕ್ಟರ​ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.



ಸಿಆರ್​​ಪಿಸಿ ಸೆಕ್ಷನ್​ 41(ಎ) ಅಡಿಯಲ್ಲಿ ಯಾವುದೇ ನೋಟಿಸ​​ ಶಾಸಕ ರಾಜಾ ಸಿಂಗ್​​ ಅವರಿಗೆ ನೀಡಲಾಗಿಲ್ಲ ಎಂದು ರಾಜಾ ಸಿಂಗ್​ ಪರ ವಕೀಲರು ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಕೋರ್ಟ​ ಎದುರು ವಾದಿಸಿದರು. ವಕೀಲರ ಈ ವಾದವನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ಜಾಮೀನನ್ನು ನೀಡಿತ್ತು.



ಜಾಮೀನು ದೊರಕಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ತೆಲಂಗಾಣದಾದ್ಯಂತ ಪ್ರತಿಭಟನೆಗಳು ಮಿತಿಮೀರಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.



ಅಂಬರ​ಪೇಟ​​, ತಲಬಕಟ್ಟಾ, ಮೊಗಲ​​ಪುರ, ಖಿಲ್ವತ್​, ಬಹದ್ದೂರ್​ಪುರ ಹಾಗೂ ಚಂಚಲಗುಡಾದಲ್ಲಿ ರಾಜಾ ಸಿಂಗ್​​​ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಪ್ರತಿಭಟನಾಕಾರರು ಕೋರ್ಟ್​ನ ಆದೇಶವನ್ನು ವಿರೋಧಿಸಿ ಬರ್ಕಾಸ್​ನಿಂದ ಚಂದ್ರಾಯನಗುಟ್ಟದವರೆಗೆ ಮೆರವಣಿಗೆ ನಡೆಸಿದರು.



ಹೈದರಾಬಾದ​ನ ಶಾಲಿಬಂಡಾದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ ಏರ್ಪಟ್ಟಿತ್ತು. ಪ್ರತಿಭಟನಾಕಾರರು ಪೊಲೀಸ್​ ವ್ಯಾನ್​ ಧ್ವಂಸಗೊಳಿಸಿದ್ದಾರೆ. ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದು ಮಾತ್ರವಲ್ಲದೇ ರಾಜಾ ಸಿಂಗ್​ ಪೋಸ್ಟರ್​​ಗೆ ಚಪ್ಪಲಿಯಿಂದ ಹೊಡೆದು ಅವರ ಪ್ರತಿಕೃತಿ ದಹಿಸಿದ್ದಾರೆ.



ನೂಪುರ್ ಶರ್ಮಾ ಬೆನ್ನಲ್ಲೇ ತೆಲಂಗಾಣದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರು​ ಪ್ರವಾದಿ ಮೊಹಮ್ಮದ ಪೈಗಂಬರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಈಡಾಗಿದ್ದಾರೆ. ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪದ ಅಡಿಯಲ್ಲಿ ರಾಜಾ ಸಿಂಗ್​​ರನ್ನು ಬಂಧಿಸಲಾಗಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ