LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಅತ್ಯಾಚಾರ ಸಂತ್ರಸ್ತೆಯನ್ನು ಹುಡುಕಿ ಮದುವೆಯಾಗಬೇಕೆಂಬ ಷರತ್ತಿನ ಮೇರೆಗೆ ಜಾಮೀನು

ಮುಂಬೈ, ೧೭- ಅತ್ಯಾಚಾರ ಪ್ರಕರಣ ಒಂದರ ಆರೋಪಿ ಜಾಮೀನು ಅರ್ಜಿ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಂದು ವರ್ಷದೊಳಗಾಗಿ ಆಕೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇರೆಗೆ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.



ಆದರೆ ಅತ್ಯಾಚಾರ ಸಂತ್ರಸ್ತೆ ಎಲ್ಲಿದ್ದಾಳೆಂಬುದು ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿದರೆ ಒಂದು ವರ್ಷದೊಳಗೆ ವಿವಾಹವಾಗಬೇಕೆಂಬ ಷರತ್ತನ್ನು ಆರೋಪಿಗೆ ನ್ಯಾಯಾಲಯ ವಿಧಿಸಿದೆ.



ಪ್ರಕರಣದ ವಿವರ: 26 ವರ್ಷದ ಆರೋಪಿ ಹಾಗೂ 22 ವರ್ಷ ವಯಸ್ಸಿನ ಯುವತಿ ಪರಸ್ಪರ ಒಪ್ಪಿಗೆ ಮೇರೆಗೆ ಸಂಬಂಧದಲ್ಲಿದ್ದರು. ಈಕೆ ಗರ್ಭಿಣಿಯಾದಾಗ ಯುವಕ ಆಕೆಯನ್ನು ದೂರ ಮಾಡಲು ಪ್ರಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಆಕೆ ಅತ್ಯಾಚಾರ ಹಾಗೂ ವಂಚನೆ ಪ್ರಕರಣವನ್ನು ದಾಖಲಿಸಿದ್ದಳು.



ತಾನು ಗರ್ಭಿಣಿ ಎಂಬ ವಿಚಾರವನ್ನು ಪೋಷಕರಿಂದ ಮುಚ್ಚಿಟ್ಟಿದ್ದ ಯುವತಿ ಕೊನೆಗೆ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಳಿಕ ಕಟ್ಟಡ ಒಂದರ ಬಳಿ ಮಗುವನ್ನು ಇಟ್ಟು ನಾಪತ್ತೆಯಾಗಿದ್ದಳು. ಬಳಿಕ ಮಗುವನ್ನು ರಕ್ಷಿಸಿ ಶಿಶು ಪಾಲನಾ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಕಾನೂನು ಪ್ರಕಾರ ದತ್ತು ನೀಡಲಾಗಿತ್ತು. ಮಗುವನ್ನು ಬಿಟ್ಟು ಹೋದ ಯುವತಿಯ ವಿರುದ್ಧವೂ ಪ್ರಕರಣ ದಾಖಲಾಗಿತ್ತು.



ಇದರ ಮಧ್ಯೆ ಜಾಮೀನು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಆರೋಪಿ, ತಾನು ಆಕೆಯನ್ನು ವಿವಾಹವಾಗಲು ಸಿದ್ಧವಿರುವುದಾಗಿ ಹೇಳಿಕೊಂಡಿದ್ದ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ದಾಂಗ್ರೆ ಅವರಿದ್ದ ನ್ಯಾಯಪೀಠ ಷರತ್ತಿನ ಮೇರೆಗೆ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ