LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೈಲಹೊಂಗಲ : ಬಸ್‌- ಎರಡು ಕಾರುಗಳ ನಡುವೆ ಅಪಘಾತ

ಬೈಲಹೊಂಗಲ, ಮೇ 24 : ತಾಲೂಕಿನ ನಯಾನಗರ ಸಮೀಪದ ಮಲಪ್ರಭಾ ನದಿ ಸೇತುವೆ ಬಳಿ ಭಾನುವಾರ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಬೈಲಹೊಂಗಲ ಘಟಕದ ಸಾರಿಗೆ ಸಂಸ್ಥೆಯ ಬಸ್‌ ಬೈಲಹೊಂಗಲದಿಂದ ಧಾರವಾಡ ಕಡೆಗೆ ತೆರಳುತ್ತಿತ್ತು. ಈ ವೇಳೆ ಬೆಳವಡಿ ಕಡೆಯಿಂದ ಬೈಲಹೊಂಗಲ ಕಡೆಗೆ ಬರುತ್ತಿದ್ದ ಕಾರಿನೊಂದಿಗೆ ಬಸ್‌ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡ ಐವರಿಗೆ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ನೆರವು ನೀಡಿ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿದ್ದು, ಬಳಿಕ ಸಂಚಾರವನ್ನು ಸುಗಮಗೊಳಿಸಲಾಯಿತು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST