LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರೈತರ ಪ್ರತಿಭಟನೆ : ನ.11ರ ವರೆಗೆ ಮದ್ಯ ಮಾರಾಟ ನಿಷೇಧ

ಬಾಗಲಕೋಟ: ಜಿಲ್ಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು, ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.



ಇಂದು ಮದ್ಯಾಹ್ನ 2 ಗಂಟೆಯಿಂದ ರಿಂದ ನವೆಂಬರ 11ರ ಮಧ್ಯರಾತ್ರಿ 12 ಗಂಟೆವರೆಗೆ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಬಾಗಲಕೋಟ ಜಿಲ್ಲಾಧಿಕಾರಿ ಪಿ ಸುನಿಲ ಕುಮಾರ ಆದೇಶ ಹೊರಡಿಸಿದ್ದಾರೆ.



ಕಳೆದ ಎರಡು ದಿನದ ಹಿಂದೆ ರೈತರು ಸಮೀರವಾಡಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಕಾರ್ಖಾನೆ ಕಚೇರಿ ಕಿಡಕಿ ಗಾಜು ಧ್ವಂಸಗೊಳಿಸಿದ್ದರು. ಬಾಗಲಕೋಟದಲ್ಲಿ ಪ್ರತಿಭಟನೆಯ ಕಾವು ಜೋರಾಗಿದ್ದು, ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST