LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭದ್ರತಾ ಲೋಪದ ಕಾರಣ ಭಾರತ ಜೋಡೋ ಯಾತ್ರೆ ತಾತ್ಕಾಲಿಕ ಸ್ಥಗಿತ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಭದ್ರತಾ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಕೇಂದ್ರಾಡಳಿತ ಸರ್ಕಾರ ಸೂಕ್ತ ಭದ್ರತೆ ನೀಡುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.



ಶುಕ್ರವಾರ ಬೆಳಿಗ್ಗೆ ರಾಮ್ಬಾನ್ ಜಿಲ್ಲೆಯ ಕ್ವಾಜಿಗುಂಡ್ನಿಂದ ಭಾರತ್ ಜೋಡೋ ಯಾತ್ರೆ ಪುನರ್ ಆರಂಭವಾಗಿತ್ತು. ಆದರೆ ಭದ್ರತಾ ಲೋಪದಿಂದ ಬನಿಹಾಲ್ ಖಾಜಿಗುಂಡ ಸಮೀಪ ದಿಢೀರ್ ಸ್ಥಗಿತಗೊಂಡಿದೆ. ಕುರಿತು ಎಐಸಿಸಿ ಉಸ್ತುವಾರಿ ರಜನಿ ಪಾಟೀಲ ಅವರು ಟ್ವೀಟ್ ಮಾಡಿ, ಜಮ್ಮು-ಕಾಶ್ಮೀರ ಆಡಳಿತವು ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಗೆ ಭದ್ರತೆ ಒದಗಿಸಲು ವಿಫಲವಾಗಿದೆ. ಭದ್ರತಾ ಲೋಪಗಳು ಕೇಂದ್ರಾಡಳಿತ ಅಸಮರ್ಥತೆ ಮತ್ತು ತಯಾರಿ ಇಲ್ಲದ ವರ್ತನೆಯನ್ನು ಸೂಚಿಸುತ್ತವೆ ಎಂದು ಆರೋಪಿಸಿದ್ದಾರೆ.



ಖಾಜಿಗುಂಡ್ ತಲುಪಿದ ನಂತರ ರಾಹುಲ್ ಗಾಂಧಿ ಅವರು ಯೋಜನೆಯ ಪ್ರಕಾರ ದಕ್ಷಿಣ ಕಾಶ್ಮೀರದ ವೆಸ್ಸು ಕಡೆಗೆ ನಡೆಯಲು ಪ್ರಾರಂಭಿಸಿದರು. ಆದರೆ ಇದ್ದಕ್ಕಿದ್ದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ನಿರ್ವಹಿಸಬೇಕಾದ ಹೊರ ಕವಚವು ಕಣ್ಮರೆಯಾಯಿತು ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ರಾಹುಲ್ ಗಾಂಧಿಯವರು ಶುಕ್ರವಾರ 11 ಕಿಲೋ ಮೀಟರ್ ಪಾದಯಾತ್ರೆ ಮಾಡಬೇಕಿತ್ತು. ಆದರೆ ಅವರು ಕೇವಲ 500 ಮೀಟರ್ ನಡೆದ ನಂತರ ಯಾತ್ರೆ ಸ್ಥಗಿತಗೊಳಿಸಲಾಯಿತು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ