LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Districts Belagavi

ಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು

ಗೋಕಾಕ, ಆಗಸ್ಟ್ 6: ತಾಲ್ಲೂಕಿನ ಕೊಣ್ಣೂರು ಗ್ರಾಮದ ಸಮೀಪ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತರನ್ನು ಸೈಫ್ ಮುಲ್ಲಾ (29), ಸಿಜಾ ಮುಲ್ಲಾ (4) ಹಾಗೂ ಇಮ್ತಿಯಾಜ ಬಡಗಾಂವ (35) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಜಿಹಾನ್ ಶಾರುಕ ಕುಡಚಿಕರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋಕಾಕ ತಾಲ್ಲೂಕಿನ ಕರೆಮ್ಮ ದೇವಿ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಹಿಡಕಲ್‌ನಿಂದ ಗೋಕಾಕದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿದ್ದ ಸೈಫ್ ಮುಲ್ಲಾ, ಅವರ ನಾಲ್ಕು ವರ್ಷದ ಪುತ್ರಿ ಸಿಜಾ ಹಾಗೂ ಸ್ನೇಹಿತ ಇಮ್ತಿಯಾಜ್ ಬಡಗಾಂವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಬಸ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ಕೂಡಲೇ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ'ವಿಶೇಷ ಮತಪಟ್ಟಿ ಪರಿಷ್ಕರಣೆ' ನೆಪದಲ್ಲಿ 1 ಕೋಟಿ ಮತದಾರರ ಹೆಸರು ಅಳಿಸುವ ಸಂಚು: ಕಾಂಗ್ರೆಸ್ಬದುಕನ್ನೇ ಮಕ್ಕಳಿಗೆ ಅರ್ಪಿಸಿದ್ದ ತಂದೆ ಅನಾಥರಂತೆ ಅಂತ್ಯಕ್ರಿಯೆ; ವಿಡಿಯೊ ಕಾಲ್‌ನಲ್ಲೇ ನೋಡಿದ ಮೂವರು ಪುತ್ರಿಯರುಆಘಾತಕಾರಿ ವಿಡಿಯೊ: ಪಂದ್ಯದ ವೇಳೆ ಬಡಿದ ಸಿಡಿಲು ಯುವ ಫುಟ್‌ಬಾಲ್ ಆಟಗಾರ ಸಾವುವಿದ್ಯಾರ್ಥಿಗಳೊಂದಿಗೆ ರಾಹುಲ್ ಸಂವಾದಕ್ಕೆ ಅನುಮತಿ ರದ್ದು; ಕಾಂಗ್ರೆಸ್ ಆಕ್ರೋಶ