LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚುನಾವಣಾ ಆಯೋಗಕ್ಕೆ ಬೆಂಬಲಿಸಿ ಬಿಜೆಪಿ ಪ್ರತಿಭಟನೆ : ರಾಹುಲ್ ಗಾಂಧಿ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೋಲಾರ, ನ. 3: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡು ಚುನಾವಣಾ ಆಯೋಗದ ಪರವಾಗಿ ಬಿಜೆಪಿ ಬ್ಯಾಟಿಂಗ್ ನಡೆಸಿದ್ದು, ದೇಶಾದ್ಯಂತ ಅರಾಜಕತೆಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ನಗರದಲ್ಲಿ ಮಂಗಳವಾರ ಬಿಜೆಪಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

‘ಲೋಕಸಭಾ ಚುನಾವಣೆಗಳಲ್ಲಿ ದೇಶದ ಜನರು ಪದೇಪದೇ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಿದ್ದಾರೆ. ಇದನ್ನು ಸಹಿಸಿಕೊಳ್ಳಲಾಗದ ರಾಹುಲ್ ಗಾಂಧಿ ಹತಾಶರಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಬದಲಾವಣೆಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದ್ದಾರೆ’ ಎಂದು ದೂರಿದರು.

ಈ ಹಿಂದೆಯೂ ದೇಶದಲ್ಲಿ ಹಲವು ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದ್ದರೂ ಕಾಂಗ್ರೆಸ್ ಈಗ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸುತ್ತಿದೆ. ಚುನಾವಣಾ ಆಯೋಗದ ಕ್ರಮಗಳನ್ನು ಅನುಮಾನದಿಂದ ನೋಡುವ ಮೂಲಕ ಸಾಂವಿಧಾನಿಕ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತಿದೆ ಎಂದು ಆರೋಪಿಸಿದರು.

‘ಕಾಂಗ್ರೆಸ್‌ಗೆ ಮತದಾರರ ಪಟ್ಟಿ ಪರಿಷ್ಕರಣೆ ಮೇಲೆ ನಂಬಿಕೆಯಿಲ್ಲ. ವಿದ್ಯುನ್ಮಾನ ಮತಯಂತ್ರಗಳ ಮೇಲೂ ನಂಬಿಕೆಯಿಲ್ಲ. ಕೊನೆಗೆ ಸುಪ್ರೀಂ ಕೋರ್ಟ ಮೇಲೂ ನಂಬಿಕೆಯಿಲ್ಲ. ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ನಿರಂತರವಾಗಿ ಅನುಮಾನ ವ್ಯಕ್ತಪಡಿಸುವುದೇ ಕಾಂಗ್ರೆಸ್‌ನ ರಾಜಕೀಯವಾಗಿದೆ’ ಎಂದು ಟೀಕಿಸಿದರು.

ಜನಾದೇಶ ಪಡೆದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಕಾಂಗ್ರೆಸ್ ಎಸ್‌ಐಆರ್ ವಿಷಯವನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

‘ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಲಾಗಿದೆ. ಜನರು ಜೀವನ ನಡೆಸುವುದೇ ದುಸ್ತರವಾಗಿದೆ. ರಾಜ್ಯ ಸರ್ಕಾರದ ನೀತಿಗಳಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದು ವಿಜಯೇಂದ್ರ ಆರೋಪಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST