LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ; ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ

ಬೆಳಗಾವಿ, ಜುಲೈ 24: ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ಹಾಗೂ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೇಶ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿ ವಿದ್ಯಾರ್ಥಿಗಳನ್ನು ರಾಜಕೀಯ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಲಾಯಿತು. ಅಲ್ಲದೆ, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಎದುರು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನೂ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಶಾಸಕ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಡಾ. ವಿ.ಐ. ಪಾಟೀಲ, ಮಹಾಂತೇಶ ದೊಡ್ಡಗೌಡರ, ಅನಿಲ ಬೆನಕೆ, ಅರವಿಂದ ಪಾಟೀಲ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಅಕ್ರಮ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ; ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಮೆಲೋನಿ ಇನ್‌ಸ್ಟಾಗ್ರಾಂನಲ್ಲಿ ಮೋದಿ ರಾಜೀನಾಮೆಗೆ ಒತ್ತಾಯ; ವಿದ್ಯಾರ್ಥಿಗಳ ಅಭಿಯಾನ ವೈರಲ್ ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ? : ಸಿ.ಟಿ. ರವಿಭೂಕುಸಿತದಿಂದ ಟಾಟಾ ಸುಮೋ ಮೇಲೆ ಬಿದ್ದ ಬಂಡೆ: 6 ತಿಂಗಳ ಮಗು ಸೇರಿ 13 ಮಂದಿ ದುರ್ಮರಣದೆಹಲಿ ಪ್ರತಿಭಟನೆ ಹಿಂದೆ ವಿದೇಶಿ ಶಕ್ತಿಗಳ ಕೈವಾಡ: ಆರ್‌ಎಸ್‌ಎಸ್‌ಭ್ರಷ್ಟ ಸಚಿವ ಪ್ರಧಾನ್ ರಾಜೀನಾಮೆ ನೀಡುವವರೆಗೆ ಚರ್ಚೆಯಿಲ್ಲ: ರಾಹುಲ್ ಗಾಂಧಿಪ್ರಧಾನ್ ರಾಜೀನಾಮೆ ಕುರಿತು ನಾಳೆ ತೀರ್ಮಾನ; ಎರಡು ಬೇಡಿಕೆಗಳಿಗೆ ಕೇಂದ್ರದ ತಾತ್ವಿಕ ಒಪ್ಪಿಗೆ: ಸಿಜೆಪಿಪೆಲೆಟ್ ಗನ್ ಬಳಕೆ ಆರೋಪ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಪ್ರಶ್ನೆಪತ್ರಿಕೆ ಸೋರಿಕೆಗೆ 10 ವರ್ಷ ಜೈಲು ಶಿಕ್ಷೆ, ₹10 ಕೋಟಿ ವರೆಗೆ ದಂಡ