LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

“ನಾ ನಾಯಕಿ” ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ -ಬೊಮ್ಮಾಯಿ

ಹುಬ್ಬಳ್ಳಿ: “ನಾ ನಾಯಕಿ” ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.



ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ಅವರ ನಾ‌ ನಾಯಕಿ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ ನಾ ನಾಯಕಿ ಎಂದು ಸ್ವಯಂ ಆಗಿ ಹೇಳಿಕೊಳ್ಳುವ ಸ್ಥಿತಿ ಅವರಿಗೆ ಬಂದಿದೆ. ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ಸಿದ್ಧರಿಲ್ಲ ಎಂದು ಹೇಳಿದರು.



ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ ಗಡ್ಕರಿ ಅವರಿಗೆ ಬೆದರಿಕೆ‌ ಕರೆ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕರೆಯ ಹಿಂದೆ ಯಾರಿದ್ದಾರೆ, ಹಿನ್ನೆಲೆ ಏನು ಹಾಗೂ ಯಾರು ಮಾರ್ಗದರ್ಶನ ನೀಡಿದ್ದಾರೆ ಎಂಬುದು ಮುಖ್ಯವಾಗಿದ್ದು, ಅದನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದರು.



ಯುವ ಜನೋತ್ಸವವನ್ನು, ಯುವ ವಿನಾಶೋತ್ಸವ' ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರದ್ದು ಯಥಾ ಬುದ್ಧಿ, ತಥಾ ಮಾತುಗಳು.‌ ಅವರಿಗೆ ವಿನಾಶದ ಕನಸುಗಳು, ಅದರಲ್ಲೂ ಕಾಂಗ್ರೆಸ್ ಗೆ ವಿನಾಶದ ಕನಸುಗಳು ಬೀಳುತ್ತಿವೆ. ಎಲ್ಲದರಲ್ಲೂ ಅವರು ವಿನಾಶವನ್ನೇ ನೋಡುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಒಳ್ಳೆಯ ಕೆಲಸವನ್ನು ಮೆಚ್ಚುವುದು ಕಾಂಗ್ರೆಸ್ ನವರಿಗೆ ಗೊತ್ತಿಲ್ಲ. ಇತ್ತೀಚೆಗೆ ಅವರ ಭಾಷೆ, ನಡವಳಿಕೆ ಹಾಗೂ ಚಿಂತನೆ ಕೀಳುಮಟ್ಟದಿಂದ ಕೂಡಿವೆ. ದೇಶ ಹಾಗೂ ರಾಜ್ಯದ ಪ್ರಗತಿ ವಿಚಾರದಲ್ಲಿ ತೀರಾ ತಳಮಟ್ಟಕ್ಕಿಳಿಯುತ್ತಿರುವುದು, ಅವರ ಹತಾಶೆಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು‌ ವಾಗ್ದಾಳಿ ನಡೆಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ