LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ನೀಟ್ ವಿವಾದಕ್ಕೆ ಉಭಯ ಸದನ ಕಲಾಪ ನಾಲ್ಕನೇ ದಿನವೂ ಮುಂದೂಡಿಕೆ

ಹೊಸದಿಲ್ಲಿ, ಜುಲೈ 23: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಂಘರ್ಷ ಗುರುವಾರವೂ ಮುಂದುವರಿದಿದ್ದು, ಮಳೆಗಾಲದ ಅಧಿವೇಶನದ ನಾಲ್ಕನೇ ದಿನವೂ ಉಭಯ ಸದನಗಳ ಕಲಾಪವನ್ನು ಮುಂದೂಡಲಾಯಿತು.

ಸಂಸತ್ ಭವನದ ಹೊರಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು.

ಇದಕ್ಕೆ ಪ್ರತಿಯಾಗಿ ಎನ್‌ಡಿಎ ಸಂಸದರೂ ಪ್ರತಿಭಟನೆ ನಡೆಸಿದರು. ಜುಲೈ 21ರಂದು ಪ್ರಧಾನಿ ನಿವಾಸದ ಎದುರು ನಡೆದ ಪ್ರತಿಭಟನೆಯನ್ನು ಖಂಡಿಸಿ ಅವರು ಘೋಷಣೆಗಳನ್ನು ಕೂಗಿದ ಪರಿಣಾಮ, ಎರಡೂ ಕಡೆಯ ಸಂಸದರ ನಡುವೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಇಂಡಿಯಾ ಮೈತ್ರಿಕೂಟ ಆಗ್ರಹಿಸಿತು. ಪ್ರತಿಭಟನೆ ವೇಳೆ ಪ್ರಿಯಾಂಕಾ ಗಾಂಧಿ ಎನ್‌ಡಿಎ ಸಂಸದರತ್ತ ತೆರಳಿದಾಗ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಸಂಸತ್‌ನ ಒಳಗೂ ವಿರೋಧ ಪಕ್ಷಗಳ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಮುಂದೂಡಲಾಯಿತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ