LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜನರ ಮನೆಬಾಗಿಲಿಗೆ ಸರ್ಕಾರ: ‘ಪ್ರಜಾಸೇವೆ’ ಇಲಾಖೆ ಸ್ಥಾಪನೆಗೆ ಡಿ.ಕೆ.ಶಿವಕುಮಾರ ಘೋಷಣೆ

ಬೆಂಗಳೂರು: ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡುವ ಪರಿಸ್ಥಿತಿಗೆ ತೆರೆ ಎಳೆಯುವ ಉದ್ದೇಶದಿಂದ ‘ಪ್ರಜಾಸೇವೆ’ ಹೆಸರಿನ ಹೊಸ ಇಲಾಖೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಘೋಷಿಸಿದ್ದಾರೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ತ್ವರಿತ ಪರಿಹಾರ ಒದಗಿಸಲು ಈ ಇಲಾಖೆಯಲ್ಲಿ ಪ್ರತ್ಯೇಕ ಸಚಿವರು ಹಾಗೂ ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ ಮುಖ್ಯಮಂತ್ರಿ, ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸಿ ಮನವಿ, ಪ್ರತಿಭಟನೆ ಹಾಗೂ ಬೇಡಿಕೆಗಳನ್ನು ಸಲ್ಲಿಸುವ ಜನರ ಸಮಸ್ಯೆಗಳನ್ನು ಸಮರ್ಪಕವಾಗಿ ಆಲಿಸಲು ವಿಶೇಷ ವ್ಯವಸ್ಥೆ ಅಗತ್ಯವಾಗಿದೆ ಎಂದು ಹೇಳಿದರು.

ಪ್ರತಿದಿನ ನೂರಾರು ಸಂಘಟನೆಗಳು ಮತ್ತು ಸಾರ್ವಜನಿಕರು ತಮ್ಮ ಸಮಸ್ಯೆಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಬರುತ್ತಿದ್ದಾರೆ. ಅವರ ಅಹವಾಲುಗಳು ಕಾನೂನುಬದ್ಧವೇ ಎಂಬುದನ್ನು ಪರಿಶೀಲಿಸಿ, ಸಂಬಂಧಿತ ಇಲಾಖೆಗಳ ಮೂಲಕ ಶೀಘ್ರ ಪರಿಹಾರ ಕಂಡುಕೊಳ್ಳುವ ಕಾರ್ಯವನ್ನು ‘ಪ್ರಜಾಸೇವೆ’ ಇಲಾಖೆ ನಿರ್ವಹಿಸಲಿದೆ ಎಂದು ಅವರು ಹೇಳಿದರು.

ಹೊಸ ಇಲಾಖೆಯ ಸಚಿವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ವಾರಕ್ಕೊಮ್ಮೆ ಕಡ್ಡಾಯವಾಗಿ ಜನಸ್ಪಂದನ ಸಭೆಗಳನ್ನು ಆಯೋಜಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಇದೇ ವೇಳೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ 15 ದಿನಗಳೊಳಗೆ ಕಾರ್ಯಯೋಜನೆ ಸಿದ್ಧಪಡಿಸುವಂತೆ ಸೂಚಿಸಿರುವ ಮುಖ್ಯಮಂತ್ರಿ, ಯಾವುದೇ ರಾಜಕೀಯ ಅಥವಾ ಇತರೆ ಒತ್ತಡಗಳಿಗೆ ಮಣಿಯದೆ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ. ಪಾರದರ್ಶಕ, ನ್ಯಾಯಸಮ್ಮತ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ

ವಿಧಾನಸೌಧದಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಕುರಿತು ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಮಹತ್ವದ ಘೋಷಣೆಗಳನ್ನು ಮಾಡಿದರು. ಕರ್ನಾಟಕದ ಕರಾವಳಿ ತೀರವು ದೇಶದ ಅತ್ಯಂತ ಸುಂದರ ಹಾಗೂ ಐತಿಹಾಸಿಕ ಪ್ರದೇಶಗಳಲ್ಲಿ ಒಂದಾಗಿದ್ದು, ಪರಿಸರಕ್ಕೆ ಧಕ್ಕೆಯಾಗದಂತೆ ಈ ಭಾಗವನ್ನು ಜಾಗತಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.

ಕರಾವಳಿಯ ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಅರಿತು ತ್ವರಿತ ನಿರ್ಧಾರಗಳನ್ನು ಕೈಗೊಳ್ಳಲು ಶೀಘ್ರದಲ್ಲೇ ಕರಾವಳಿ ಭಾಗದಲ್ಲೇ ಸಚಿವ ಸಂಪುಟ ಸಭೆ ನಡೆಸಲಾಗುವುದು ಎಂದು ಅವರು ಘೋಷಿಸಿದರು.

ಸಿಆರ್‌ಝಡ್ ಹಾಗೂ ಅರಣ್ಯ ಇಲಾಖೆಗಳ ಅನುಮತಿ ಪ್ರಕ್ರಿಯೆಗಳಿಂದ ಯೋಜನೆಗಳಿಗೆ ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳ ಕುರಿತು 15ರಿಂದ 20 ದಿನಗಳೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೂಡಿಕೆದಾರರಿಗೆ ಇಲಾಖೆಗಳ ಅಡೆತಡೆ ತಪ್ಪಿಸಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಒಲವು ತೋರಿದೆ.

ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಈಗಾಗಲೇ ₹718.63 ಕೋಟಿ ಹೂಡಿಕೆ ಮೌಲ್ಯದ 45 ಬೃಹತ್ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ ಸುಮಾರು 4,500 ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ಈ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ವೈಶಿಷ್ಟ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಗೊಳಿಸಲು ವಿಶೇಷ ಯೋಜನೆ ರೂಪಿಸಲಾಗುವುದು. ಇದೇ ವೇಳೆ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರೊಂದಿಗೆ ಕರಾವಳಿ ಭಾಗದ ಸಿನಿಮಾ, ಜನಪದ ಕಲೆ ಹಾಗೂ ಸಂಗೀತಕ್ಕೆ ಹೆಚ್ಚಿನ ಉತ್ತೇಜನ ನೀಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಹೂಡಿಕೆಗಳನ್ನು ಆಕರ್ಷಿಸಲು ಉದ್ಯಮಿಗಳಿಗೆ ಸಹಾಯಧನ, ಬಡ್ಡಿ ಸಹಾಯಧನ ಹಾಗೂ ವಿವಿಧ ರಿಯಾಯಿತಿಗಳನ್ನು ನೀಡುವ ಮೂಲಕ ಸರ್ಕಾರ ಅಗತ್ಯ ಪ್ರೋತ್ಸಾಹ ಒದಗಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವತಿಯೊಂದಿಗೆ ಹೊಟೇಲ್‌ಗೆ ತೆರಳಿದ್ದ ಯುವಕನ ಮೇಲೆ ಹಲ್ಲೆಮುತಗಾದ 300 ವರ್ಷದ ಬಾವಿ ಪುನರುಜ್ಜೀವನಗೊಳಿಸಿದ ಪ್ಯಾಸ್ ಫೌಂಡೇಶನ್ಬುರ್ಖಾ ಅವನತಿಯ ಸಂಕೇತ : ಇಮ್ತಿಯಾಜ ಅಲಿ ಸೆಲ್ಫಿಗೆ ಜೀವಬಲಿ: ಭಾವಿ ಪತ್ನಿ ಎದುರೇ 400 ಅಡಿ ಕಂದಕಕ್ಕೆ ಬಿದ್ದು ಸಾವುಜನರ ಮನೆಬಾಗಿಲಿಗೆ ಸರ್ಕಾರ: ‘ಪ್ರಜಾಸೇವೆ’ ಇಲಾಖೆ ಸ್ಥಾಪನೆಗೆ ಡಿ.ಕೆ.ಶಿವಕುಮಾರ ಘೋಷಣೆನೀಟ್ ಪರೀಕ್ಷೆಗೆ ಬಿಗಿ ಭದ್ರತೆ: ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಿತ ಪ್ರದೇಶ ಘೋಷಣೆಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 1,421 ಹುದ್ದೆಗಳ ನೇಮಕಾತಿ: ಜೂನ್ 22ರಿಂದ ಅರ್ಜಿ ಸಲ್ಲಿಕೆ ಆರಂಭಅಮಿತ್ ಶಾ ಭೇಟಿಗೆ ಹೊರಟಿದ್ದ ಎಂಇಎಸ್ ಪುಂಡರ ತಡೆ: ಹತ್ತರಗಿ ಟೋಲ್‌ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆಬೆಳಗಾವಿ ಬಳಿ ಭೀಕರ ಅಪಘಾತ: ಹೊತ್ತಿ ಉರಿದ ಲಾರಿಗಳುನಾಯಿ ಉಳಿಸಲು ಹೋಗಿ ತಾಯಿಯ ಸಾವು!