LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

BREAKING: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಅಭಿಮಾನಿ: ವ್ಯಕ್ತಿ ಸ್ಥಿತಿ ಗಂಭಿರ

ಚೆನ್ನೈ, ಮೇ 9 : ತಮಿಳುನಾಡಿನಲ್ಲಿ ನಟ ವಿಜಯ್‌ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಪಕ್ಷ ಸರ್ಕಾರ ರಚನೆಗೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯ್‌ ಅಭಿಮಾನಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಿರುನಲ್ವೇಲಿಯಲ್ಲಿ ನಡೆದಿದೆ.

ಇಸಕ್ಕಿರಾಜ್‌ (47) ಎಂಬಾತ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯ್‌ ಮುಖ್ಯಮಂತ್ರಿಯಾಗುವುದನ್ನು ನೋಡಬೇಕು ಎಂಬ ಆಸೆ ಇದ್ದರೂ ಸರ್ಕಾರ ರಚನೆ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ 108 ಸ್ಥಾನಗಳಲ್ಲಿ ಜಯಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆಗೆ ಅಗತ್ಯವಿರುವ 118 ಶಾಸಕರ ಬೆಂಬಲ ಲಭ್ಯವಾಗದ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಸರ್ಕಾರ ರಚನೆಗೆ ತಕ್ಷಣ ಅನುಮತಿ ನೀಡಿಲ್ಲ.

ಮೊದಲು ಬಹುಮತದ ಬೆಂಬಲ ತೋರಿಸಿ ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡಿಸುವಂತೆ ರಾಜ್ಯಪಾಲರು ವಿಜಯ್‌ಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗಾಗಿ ಟಿವಿಕೆ ನಾಯಕರು ಮೈತ್ರಿ ಕಸರತ್ತು ಮುಂದುವರೆಸಿದ್ದಾರೆ.

ಈ ಬೆಳವಣಿಗೆಗಳ ವಿರುದ್ಧ ಟಿವಿಕೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ ಚೆನ್ನೈನ ಲೋಕಭವನದ ಎದುರು ಟಿವಿಕೆ ಕಾರ್ಯಕರ್ತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಆತನನ್ನು ರಕ್ಷಿಸಿದ್ದರು.

ಈಗ ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST