LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಸಂಬಂಧಿಕರಿಂದ ಇಬ್ಬರು ಸಹೋದರರ ಬರ್ಬರ ಹತ್ಯೆ

ಬೆಳಗಾವಿ, ಜುಲೈ 17: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕೌಟುಂಬಿಕ ಕಲಹವು ಇಬ್ಬರು ಸಹೋದರರ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಕೊಲೆಯಾದ ಸಹೋದರರು. ಸಂಬಂಧಿಕರೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರನ್ನೂ ಹತ್ಯೆ ಮಾಡಿರುವುದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೃತರ ಕುಟುಂಬ ಮತ್ತು ಅವರ ಸಂಬಂಧಿಕರ ನಡುವೆ ಕೆಲ ದಿನಗಳಿಂದ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಗುರುವಾರ ಈ ವಿಚಾರವಾಗಿ ಮಾತಿನ ಚಕಮಕಿ ನಡೆದಿದ್ದು, ವಾಗ್ವಾದ ತೀವ್ರ ಸ್ವರೂಪ ಪಡೆದಿದೆ. ಈ ವೇಳೆ ಆಕ್ರೋಶಗೊಂಡ ಸುಮಾರು ಆರು ಮಂದಿ ಸಂಬಂಧಿಕರು ಮಾರಕಾಸ್ತ್ರಗಳೊಂದಿಗೆ ಸಹೋದರರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ತೀವ್ರ ರಕ್ತಸ್ರಾವಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುರಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ, ಮುರಗೋಡ ಸಿಪಿಐ ಐ.ಎಂ. ಮಠಪತಿ ಹಾಗೂ ಪಿಎಸ್‌ಐ ಎಲ್.ಬಿ. ಮಾಳಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಮುರಗೋಡ ಪೊಲೀಸರು ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ