LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬಸ್ ಪ್ರಯಾಣ ದರ ಹೆಚ್ಚಳ: ಎರಡು ದಿನದಲ್ಲಿ ವರದಿ

ಬೆಂಗಳೂರು, ಸೆ. 30 : (ಸಮದರ್ಶಿ ಸುದ್ದಿ) - ರಾಜ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಪರಿಷ್ಕರಣೆ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಕೆಯಾಗಲಿದ್ದು, ಅದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳ ಅನುಮೋದನೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ತಿಳಿಸಿದ್ದಾರೆ.

ರಾಜಧಾನಿಯ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕುವ ಸಂಬಂಧ ಬುಧವಾರ ನಡೆದ ಸಭೆಯ ಬಳಿಕ ಅವರು ಮಾತನಾಡಿದರು.

ರಾಜ್ಯದ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಸಚಿವರು ಹೇಳಿದರು. ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ನಾಲ್ಕು ಬಾರಿ ಡೀಸೆಲ್ ಬೆಲೆ ಹೆಚ್ಚಿಸಿದ್ದು, ಪ್ರತಿ ಲೀಟರ್‌ಗೆ ₹15ರಿಂದ ₹16ರವರೆಗೆ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳಿಗೆ ವಾರ್ಷಿಕ ಸುಮಾರು ₹8 ಸಾವಿರ ಕೋಟಿ ಆರ್ಥಿಕ ಹೊರೆ ಉಂಟಾಗುತ್ತಿದೆ ಎಂದು ತಿಳಿಸಿದರು.

ಅತುಲ್ ತಿವಾರಿ ಅವರು ಎಲ್ಲ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಿದ್ದು, ಎರಡು ದಿನಗಳಲ್ಲಿ ವರದಿ ಸಲ್ಲಿಸಲಿದ್ದಾರೆ. ವರದಿಯನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಪ್ರಯಾಣ ದರ ಪರಿಷ್ಕರಣೆ ಕುರಿತು ತೀರ್ಮಾನಿಸಲಾಗುವುದು ಎಂದರು.

ಬೇರೆ ರಾಜ್ಯಗಳ ಮಹಿಳೆಯರೂ ರಾಜ್ಯದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿರುವ ಕುರಿತು ವರದಿಗಳು ಬರುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಇನ್ನೆರಡು ತಿಂಗಳಲ್ಲಿ ರಾಜ್ಯದ ಮಹಿಳೆಯರಿಗೆ ‘ಶಕ್ತಿ’ ಯೋಜನೆಯ ಸ್ಮಾರ್ಟ್‌ಕಾರ್ಡ್ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪಾದಚಾರಿ ಮಾರ್ಗದಲ್ಲಿ ವಾಹನ ನಿಲ್ಲಿಸುವವರಿಗೆ ಪ್ರಸ್ತುತ ವಿಧಿಸಲಾಗುತ್ತಿರುವ ₹500 ದಂಡವನ್ನು ₹5,000ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅದೇ ರೀತಿ ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸಿದರೂ ₹5,000 ದಂಡ ವಿಧಿಸಲಾಗುವುದು ಎಂದು ಬೈರತಿ ಸುರೇಶ ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST