LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಶಿಸ್ತು, ಜಾಗೃತಿಯಿಂದ ಗಣೇಶೋತ್ಸವ ಆಚರಿಸಿ: ಮೇಯರ್ ಪ್ರೀತಿ ಕಾಮಕರ್

news_1789560068_0_843.webp

ಬೆಳಗಾವಿ, ಸೆ. 16 : ಗಣೇಶೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸುವ ಮಹಾನಗರದ ಜನತೆ ಯಾವುದೇ ರೀತಿಯ ಅನಾಹುತ, ತೊಂದರೆಗಳಿಗೆ ಅವಕಾಶವಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಿ, ಶಿಸ್ತು ಹಾಗೂ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಮಹಾನಗರಪಾಲಿಕೆ ಮೇಯರ್ ಪ್ರೀತಿ ಕಾಮಕರ್ ಮನವಿ ಮಾಡಿದರು.

ಮಹಾನಗರ ಪಾಲಿಕೆಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿ ನಗರದ ಜನತೆಗೆ ಗಣೇಶೋತ್ಸವದ ಶುಭಾಶಯ ಕೋರಿದ ಅವರು, ಉತ್ತಮ ಮಳೆ, ಸಮೃದ್ಧ ಬೆಳೆ ದೊರೆತು ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಗಣೇಶನಲ್ಲಿ ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಪೂಜೆಯಲ್ಲಿ ಪಾಲ್ಗೊಂಡು ಉಪಮೇಯರ್ ಹನುಮಂತ ಕೊಂಗಾಲಿ ಮಾತನಾಡಿ, ಗಣೇಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಲಾಗಿದೆ. ಸಭೆಗಳಲ್ಲಿ ಕೈಗೊಂಡ ನಿರ್ಣಯ ಹಾಗೂ ರೂಪುರೇಷೆಗಳಂತೆ ಉತ್ಸವವನ್ನು ಶಿಸ್ತುಬದ್ಧವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬೆಳಗಾವಿಯ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಿದೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ. ಸಾರ್ವಜನಿಕರು ಶ್ರದ್ಧೆ, ಭಕ್ತಿ ಮತ್ತು ಸಂತಸದಿಂದ ಉತ್ಸವದಲ್ಲಿ ಪಾಲ್ಗೊಂಡು ಶಾಂತಿ, ಸೌಹಾರ್ದ ಕಾಪಾಡಬೇಕು ಎಂದು ಅವರು ಮನವಿ ಮಾಡಿದರು.

ಪಾಲಿಕೆ ಆಯುಕ್ತ ಕಾರ್ತಿಕ್ ಎಂ., ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೇಯಸ್ ನಾಕಾಡಿ, ರಮೇಶ ಮೈಲುಗೋಳ, ರಾಜು ಭಾತಕಾಂಡೆ, ಸಾರಿಕಾ ಪಾಟೀಲ ಸೇರಿದಂತೆ ನಗರಸೇವಕರು ಹಾಗೂ ಪಾಲಿಕೆ ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಸಮವಸ್ತ್ರದಲ್ಲಿದ್ದ ಪೊಲೀಸರು; ಇಬ್ಬರ ವರ್ಗಾವಣೆಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಣಿಯಬೇಡಿ: ರಾಹುಲ್ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಡಾ. ಜಿ. ಪರಮೇಶ್ವರಶಿಸ್ತು, ಜಾಗೃತಿಯಿಂದ ಗಣೇಶೋತ್ಸವ ಆಚರಿಸಿ: ಮೇಯರ್ ಪ್ರೀತಿ ಕಾಮಕರ್ಆಸ್ತಿ ಹಂಚಿಕೆ ವಿವಾದ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ, ವಕೀಲ ಪುತ್ರಿಯ ಬರ್ಬರ ಹತ್ಯೆಯುಪಿಐ ಶುಲ್ಕ ಜನರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್’: ಸಚಿವ ಶಿವರಾಜ ತಂಗಡಗಿ ಟೀಕೆ‘ವಂದೇ ಮಾತರಂ’ ಪೂರ್ಣ ಹಾಡಿದರೆ ರಾಜೀನಾಮೆ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲುರೈಲ್ವೆ ಯೋಜನೆಗೆ ಭೂಸ್ವಾಧೀನ: ಎಕರೆಗೆ ₹1 ಕೋಟಿ ಪರಿಹಾರಕ್ಕೆ ರೈತರ ಆಗ್ರಹಲಾಡ್ಜನಲ್ಲಿ ಯುವತಿ ಅನುಮಾನಾಸ್ಪದ ಸಾವು₹2 ಸಾವಿರಕ್ಕಿಂತ ಹೆಚ್ಚಿನ ಯುಪಿಐ ವ್ಯಾಪಾರಿ ಪಾವತಿಗೆ ಶೇ 0.4 ಎಂಡಿಆರ್