LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಅತ್ತ ಚೀನಾದಿಂದ ಯುದ್ಧದ ತಯಾರಿ, ಇತ್ತ ನಿದ್ದೆಯಲ್ಲಿ ಕೇಂದ್ರ ಸರ್ಕಾರ -ರಾಹುಲ್ ಗಾಂಧಿ

ಜೈಪುರ, ೧೬- ಭಾರತ ಜೋಡೋ ಯಾತ್ರೆಯ ಭಾಗವಾಗಿ ಪ್ರಸ್ತುತ ರಾಜಸ್ಥಾನದಲ್ಲಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು,  ಅತ್ತ ಚೀನಾ ಯುದ್ಧಕ್ಕೆ ಸಿದ್ಧತೆ ಮಾಡುತ್ತಿದೆ, ಇತ್ತ  ಕೇಂದ್ರ ಸರ್ಕಾರ ನಿದ್ದೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.



ಭಾರತ ಜೋಡೋ ಯಾತ್ರೆ ೧೦೦ ದಿನ ಪೂರೈಸಿದ ಸಂದರ್ಭದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಚೀನಾ ಪೂರ್ಣ ಪ್ರಮಾಣದ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಬೆದರಿಕೆ ಸ್ಪಷ್ಟವಾಗಿದೆ. ಆದರೆ, ನಮ್ಮ ಸರ್ಕಾರವು ಬೆದರಿಕೆಯನ್ನು ನಿರ್ಲಕ್ಷಿಸುತ್ತಿದೆ. ಕೇಂದ್ರವು ನಮ್ಮಿಂದ ಸತ್ಯಗಳನ್ನು ಮರೆಮಾಡಲು ಪ್ರಯತ್ನಿಸುತ್ತಿದೆ ಎಂದರು.



ಅಂತಹ ವಿಷಯಗಳನ್ನು ಹೆಚ್ಚು ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಚೀನಾ ಬಗ್ಗೆ ಎಚ್ಚರಿಕೆ ವಹಿಸುವಂತೆ ನಾನು ಈ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇನೆ. ಚೀನಾದ ಮಾದರಿಯನ್ನು ನೋಡಿ. ಅವರು ಲಡಾಕ್ ಮತ್ತು ಅರುಣಾಚಲದ ಕಡೆ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಆದರೆ ಭಾರತ ಸರ್ಕಾರವು ನಿದ್ದೆ ಮಾಡುತ್ತಿದೆ ಎಂದು ದೂರಿದ್ದಾರೆ.





ತವಾಂಗ್ ಸೆಕ್ಟರ್ ಬಳಿಯ ಯಾಂಗ್‌ಸ್ಟೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವಿನ ಘರ್ಷಣೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಹೇಳಿಕೆಗಳು ಬಂದಿವೆ.



Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ