LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಜಾಲತಾಣಗಳು ಶೈಕ್ಷಣಿಕ ಅಭಿವೃದ್ಧಿಗೆ ಪೂರಕ -ಕುಲಪತಿ ರಾಮಚಂದ್ರ ಗೌಡ

ಬೆಳಗಾವಿ, 30- ಜಾಲತಾಣಗಳು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿದ್ದು ವಿದ್ಯಾರ್ಥಿಗಳ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಜಾಲತಾಣದ ಅವಶ್ಯಕತೆ ತುರ್ತಾಗಿತ್ತು. ಅದು ಈಗ ಈಡೇರಿರುವುದರಿಂದ ಮಹಾವಿದ್ಯಾಲಯವು ಹೊರಜಗತ್ತಿಗೆ ತನ್ನನ್ನು ತೆರೆದುಕೊಳ್ಳುತ್ತಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರ ಗೌಡ ಹೇಳಿದರು.



ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಜಾಲತಾಣ (ವೆಬಸೈಟ್) ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದರಿಂದ ಮಹಾವಿದ್ಯಾಲಯಗಳ ಶೈಕ್ಷಣಿಕ ವ್ಯವಸ್ಥೆಗೆ ಇನ್ನಷ್ಟು ಪುಷ್ಟಿ ಸಿಗಲಿದೆ. ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಮಹಾವಿದ್ಯಾಲಯದ ಕುರಿತು ಮಾಹಿತಿ ತಾವಿದ್ದಲ್ಲಿಯೇ ಪಡೆದುಕೊಳ್ಳಬಹುದು. ಈ ಜಾಲತಾಣ ಮಹಾವಿದ್ಯಾಲಯ ಮತ್ತು ಸಮಾಜದ ನಡುವೆ ಕೊಂಡಿಯಾಗಲಿದೆ ಎಂದು ಜಾಲತಾಣದ ಮಹತ್ವದ ಕುರಿತು ವಿವರಿಸಿದರು.



ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಸಚಿವೆ ರಾಜಶ್ರೀ ಜೈನಾಪುರೆ, ಮೌಲ್ಯಮಾಪನ ಕುಲಸಚಿವ ಪ್ರೊ.. ಶಿವಾನಂದ ಗೊರನಾಳೆ, ವಿತ್ತಾಧಿಕಾರಿ ಪ್ರೊ.. ಎಸ್. ಬಿ. ಆಕಾಶ, ವಿವಿಯ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ. ಎಸ್. ಎಂ. ಗಂಗಾಧರಯ್ಯ, ವಿದ್ಯಾರ್ಥಿ ಉದ್ಯೋಗ ಕೋಶದ ಅಧಿಕಾರಿ ಪ್ರೊ. ಆರ್. ಎನ್. ಮನಗೂಳಿ, ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ. ಮುಕುಂದ ಮುಂಡರಗಿ, ಜಾಲತಾಣದ ನಿರ್ವಹಣಾಧಿಕಾರಿ ಡಾ. ಬಾಲಾಜಿ ಆಳಂದೆ, ಡಾ. ಮಹಾಂತೇಶ ಕುರಿ, ತಾಂತ್ರಿಕ ಸಲಹೆಗಾರ ಸಂತೋಷ ರಜಪೂತ, ಚೇತನ್ ಗಂಗಾಯಿ ಹಾಗೂ ವಿಶ್ವವಿದ್ಯಾಲಯ ಮತ್ತು ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್ ಎಸ್ ತೇರದಾಳ ಸ್ವಾಗತಿಸಿದರು, ಡಾ. ಜ್ಯೋತಿ ಪಾಟೀಲ ನಿರೂಪಿಸಿದರು, ಡಾ. ಅರ್ಜುನ ಜಂಬಗಿ ವಂದಿಸಿದರು.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ