LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಬದ್ಧ: ಮುಖ್ಯಮಂತ್ರಿ

ಬೆಂಗಳೂರು: ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲಾ ಸಹಾಯ, ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.





ಅವರು ಇಂದು ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ವಿಜಯ ದಿವಸ ಸಮಾರಂಭವನ್ನು ಇಂದು ಉದ್ಘಾಟಿಸಿ ಮಾತನಾಡಿ, ಭಾರತ ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ಬಾಂಗ್ಲಾ ವಿಮೋಚನೆ, ಕಾರ್ಗಿಲ್ ಸೇರಿದಂತೆ ಅನೇಕ ಯುದ್ಧಗಳಲ್ಲಿ ಕರ್ನಾಟಕದ ಯೋಧರು ತಮ್ಮ ಪ್ರಾಣ ತ್ಯಾಗ ಮಾಡಿ ಭಾರತಕ್ಕೆ ವಿಜಯ ತಂದುಕೊಟ್ಟಿದ್ದಾರೆ. ಅದರ ಸ್ಮರಣಾರ್ಥವಾಗಿ ವಿಜಯ ದಿವಸ ಆಚರಣೆ ಮಾಡಲಾಗುತ್ತದೆ. ರಕ್ಷಣಾ ಪಡೆಗಳ ಸೇವೆ ಅತ್ಯಂತ ಶ್ರೇಷ್ಠ ಸೇವೆ. ಅಲ್ಲಿಗೆ ಸೇರುವ ಮುನ್ನವೇ ಎಲ್ಲಾ ತ್ಯಾಗಕ್ಕೂ ಸಿದ್ದರಾಗಿರಬೇಕು ಎಂದು ಮನಗಂಡು ಸೇರುತ್ತೇವೆ. ದೇಶದ ರಕ್ಷಣೆ ಹಾಗೂ ಅದರ ಜನರಿಗಾಗಿ ಪ್ರಾಣ ತ್ಯಾಗ ಮಾಡುವ ಮೂಲಕ ದೇಶಕ್ಕೆ ವಿಜಯ ಪ್ರಾಪ್ತಿ ಯಾಗಿದ್ದನ್ನು ನೋಡಲೂ ಅವರಿರುವುದಿಲ್ಲ. ಮಾನವೀಯತೆಯ ಅತ್ಯಂತ ಶ್ರೇಷ್ಠ ಗುಣವನ್ನು ಹೊಂದಿರುವ ಸೇವೆ ಇದು ಎಂದರು.



ಮಾನವನ ಹೊಂದಾಣಿಕೆಯ ಗುಣ ಅತ್ಯಂತ ಶ್ರೇಷ್ಠವಾದುದು. ಪ್ರತಿಕೂಲ ವಾತಾವರಣದಲ್ಲಿಯೂ ಬದುಕಿ, ಸೈನಿಕರು ಹೋರಾಡುತ್ತಾರೆ. ದೇಶವನ್ನು ವಿಜಯಪಥದತ್ತ ನಡೆಸಿ, ಪ್ರಾಣತ್ಯಾಗ ಮಾಡಿದ ಹಾಗೂ ಗಾಯಗೊಂಡ ಎಲ್ಲ ಯೋಧರಿಗೂ ಮನದಾಳದ ನಮನ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಅವರ ಅಪ್ರತಿಮ ತ್ಯಾಗ ದೇಶಕ್ಕೆ ವಿಜಯ ತಂದು ಸುರಕ್ಷಿತವಾಗಿ ಇಟ್ಟಿದೆ. ಸಾಮಾನ್ಯ ನಾಗರಿಕರು ಶಾಂತಿಯಿಂದಿರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ನುಡಿದರು.



ಯಾವುದೇ ಸಮಯದಲ್ಲಿ ಯುದ್ಧಕ್ಕೆ ತಯಾರಿರಲು ಅತ್ಯಂತ ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಅಭ್ಯಾಸವನ್ನು ಬೇಡುವ ರಕ್ಷಣಾ ಪಡೆ ಮಾನಸಿಕವಾಗಿಯೂ ಸನ್ನದ್ಧರಾಗಿರಬೇಕು. ಆಧುನಿಕ ಕಾಲದಲ್ಲಿ ತಮ್ಮ ಸರಹದ್ದನ್ನು ವಿಸ್ತರಿಸಲು ಪ್ರಯತ್ನಿಸುತ್ತವೆ. ಆದರೆ ಈ ಕಾಲದಲ್ಲಿ ಅದಕ್ಕೆ ಅವಕಾಶವಿಲ್ಲ. ಆದರೂ ಸಾಹಸವನ್ನು ಮಾಡುತ್ತಿರುತ್ತಾರೆ. ಕೆಲವು ಹಿಂದಿನ ಅನುಭವದಿಂದ ಸೈನಿಕರು ಗಡಿಯಲ್ಲಿ ಸದಾ ಸನ್ನದ್ಧರಾಗಿದ್ದಾರೆ. ಯಾವುದೇ ದೇಶ ಒಂದಿಂಚೂ ಒಳಗೆ ಬಂದರೂ ಹಿಮ್ಮೆಟ್ಟಿಸಿ ಸೋಲಿಸುವ ಶಕ್ತಿ ನಮ್ಮ ಸೈನಿಕರಿಗಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕಿದೆ ಎಂದು ಅವರು ಹೇಳಿದರು.



Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ