LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್‌ ಎಚ್ಚರಿಕೆ

ಬೆಂಗಳೂರುನಲ್ಲಿ, ಮೇ 2 : ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಂತರ ಮೊದಲ ಬಾರಿಗೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ನಿರ್ದೇಶಕರು ಹಾಗೂ ಆಯುಕ್ತರು ಭಾಗವಹಿಸಿದ್ದರು. ಅಭಿವೃದ್ಧಿ ಹಾಗೂ ಜನಪರ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಸೂಚಿಸಿದರು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಆಡಳಿತ ಯಂತ್ರದ ಮೇಲೆ ಪರಿಣಾಮ ಬಿದ್ದಿದೆ. ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ಅಧಿಕಾರಿಗಳಲ್ಲಿ ಉಡಾಫೆಯ ಮನೋಭಾವ ಹುಟ್ಟಿಸಿದ್ದವೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಡಳಿತಕ್ಕೆ ಚುರುಕು ತರಲು ಮುಖ್ಯಮಂತ್ರಿ ಸಭೆ ನಡೆಸಿದರು.

ವಿರೋಧ ಪಕ್ಷಗಳು ಕೂಡ ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸುತ್ತಿದ್ದವು. ಈ ನಡುವೆ ಉನ್ನತ ಮಟ್ಟದ ಸಭೆಯ ಮೂಲಕ ಆಡಳಿತಕ್ಕೆ ದಿಕ್ಕು ನೀಡಲು ಮುಖ್ಯಮಂತ್ರಿ ಮುಂದಾಗಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಘೋಷಿತ ಯೋಜನೆಗಳು ಹಾಗೂ ಕಾರ್ಯಕ್ರಮಗಳಿಗೆ ತ್ವರಿತವಾಗಿ ಅಧಿಸೂಚನೆ ಮತ್ತು ಆದೇಶಗಳನ್ನು ಹೊರಡಿಸಬೇಕು. ವಿಳಂಬ ಕಂಡುಬಂದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಎಚ್ಚರಿಸಿದರು.

ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ ಕೆಲವು ಯೋಜನೆಗಳು ಇನ್ನೂ ಅನುಷ್ಠಾನಗೊಳ್ಳದಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಅವರು ಆಕ್ಷೇಪಿಸಿದರು.

ಅನುದಾನದ ಕೊರತೆ ಬಗ್ಗೆ ಕೆಲ ಅಧಿಕಾರಿಗಳು ಹೇಳಿದಾಗ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಹಣಕಾಸು ವ್ಯವಸ್ಥೆ ಮಾಡಿ ಬಳಿಕವೇ ಯೋಜನೆಗಳನ್ನು ಘೋಷಿಸಲಾಗುತ್ತದೆ. ಅನಗತ್ಯ ನೆಪ ಹೇಳದೇ ಜನರಿಗೆ ಸೌಲಭ್ಯ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಕೆಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ಹಾಗೂ ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕೆಲ ಅಧಿಕಾರಿಗಳು ಕಚೇರಿಗೆ ಹಾಜರಾಗದೆ ಬೇರೆಡೆ ಕುಳಿತು ಕಡತಗಳನ್ನು ಪರಿಶೀಲಿಸುತ್ತಿರುವುದೂ ಗಮನಕ್ಕೆ ಬಂದಿದೆ. ಇಂತಹ ಧೋರಣೆಗಳನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ಚರಿಸಿದರು.

 

 

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಘೋಷಣೆಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್‌ ಎಚ್ಚರಿಕೆಉದ್ಯೋಗ ಸಿಗದೆ ಖಿನ್ನತೆ: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆಕಮರ್ಷಿಯಲ್ ಗ್ಯಾಸ್ ದರ ಶೇ.50ರಿಂದ ಶೇ.60ರಷ್ಟು ಹೆಚ್ಚಳ!ಬೋಟ್ ದುರಂತದಲ್ಲಿ ಮನಕಲಕುವ ದೃಶ್ಯ: ಮಗುವನ್ನು ಎದೆಗವಚಿಕೊಂಡ ತಾಯಿಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರಮತ ಎಣಿಕೆಯಲ್ಲಿ ಕೇಂದ್ರ ಸಿಬ್ಬಂದಿ ನಿಯೋಜನೆಗೆ ಟಿಎಂಸಿ ವಿರೋಧ: ಅರ್ಜಿ ತಿರಸ್ಕರಿಸಿದ ಸುಪ್ರೀಮ ಕೋರ್ಟವಾಣಿಜ್ಯ ಎಲ್‌ಪಿಜಿ ಸಿಲಿಂಡರ 993ರೂ.ಹೆಚ್ಚಳ!ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ‌ ರದ್ದು ಕೋರಿದ್ದ ಅರ್ಜಿ ಹಿಂಪಡೆದ ಎಚ್.ಡಿ. ರೇವಣ್ಣರಾಜಕೀಯ ಸಭೆಗಳಿಗೆ ಧಾರ್ಮಿಕ ಸ್ಥಳಗಳ ಬಳಕೆಗೆ ಅವಕಾಶ ಇಲ್ಲ : ಹೈಕೋರ್ಟ