LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಧಾರವಾಡ ಶಾಲೆಯಿಂದ ಕಿಡ್ನಾಪ್ ಆಗಿದ್ದ ಮಕ್ಕಳು ದಾಂಡೇಲಿಯಲ್ಲಿ ಪತ್ತೆ, ಕಿಡ್ನಾಪರ್ ಅರೆಸ್ಟ್

ಧಾರವಾಡ: ಧಾರವಾಡದ ಕಮಲಾಪುರ ಶಾಲೆಯಿಂದ ಕಿಡ್ನ್ಯಾಪ್‌ ಆಗಿದ್ದ ಇಬ್ಬರು ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪತ್ತೆಯಾಗಿದ್ದಾರೆ. ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಹಾಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ.



ಧಾರವಾಡದ ಕಮಲಾಪುರ ಸರ್ಕಾರಿ ಶಾಲೆಯ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಒಬ್ಬ ಬಾಲಕ ಮತ್ತು ಒಬ್ಬಳು ಬಾಲಕಿಯನ್ನು ಸೋಮವಾರ ಮಧ್ಯಾಹ್ನ ಊಟದ ವಿರಾಮದ ವೇಳೆ ವ್ಯಕ್ತಿಯೊಬ್ಬ ಬೈಕ್ ಮೇಲೆ ಕೂಡ್ರಿಸಿಕೊಂಡು ಪರಾರಿಯಗಿದ್ದ. ಕಮಲಾಪುರದ ಮನೆಯೊಂದರ ಸಿಸಿ ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ.



ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅವರು ಎಲ್ಲಾ ಕಡೆ ತಕ್ಷಣವೇ ಮಾಹಿತಿ ರವಾನಿಸಿ, ಹುಡುಕಾಟ ಆರಂಭಿಸಿದ್ದರು.

ಪೊಲೀಸರು ಮಕ್ಕಳಿಗಾಗಿ ಹುಡುಕಾಟದಲ್ಲಿದ್ದಾಗ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪದ ಜೊಯಿಡಾ ಬಳಿ ಬೈಕ್ ಅಪಘಾತಕ್ಕೀಡಾಗಿರುವುದು ಗೊತ್ತಾಗಿದೆ. ಈ ಬೈಕ್ ಮೇಲೆ ಒಬ್ಬ ವ್ಯಕ್ತಿ ಹಾಗೂ ಇಬ್ಬರು ಮಕ್ಕಳಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮಕ್ಕಳನ್ನು ಮಾತನಾಡಿಸಿದಾಗ ವಿಷಯ ಬೆಳಕಿಗೆ ಬಂದಿದೆ.  ಪೊಲೀಸರು ವ್ಯಕ್ತಿಯ ವಿಚಾರಣೆ ನಡೆಸಿದಾಗ ಆತ ಧಾರವಾಡ ನಗರದ ಅಬ್ದುಲ್ ಕರೀಂ ಎಂಬುದು ತಿಳಿದಿದೆ. ಈ ವೇಳೆ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಅಪಘಾತದಲ್ಲಿ ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಧಾರವಾಡ ಉಪನಗರ ಠಾಣೆ ಪೊಲೀಸರ ಒಂದು ತಂಡ ಜೋಯ್ಡಾಕ್ಕೆ ತೆರಳಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ