LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ : 15 ಜನರಿಗೆ ಗಾಯ 

ಗದಗ : ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿಯಲ್ಲಿ ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ ನಡೆದಿದ್ದು, ಈ ಗಲಾಟೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಂತಹ ಘಟನೆ ನಡೆದಿದೆ.


ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ಮಧ್ಯೆ ಈ ಗಲಾಟೆ ನಡೆದಿದ್ದು, ವಾಲ್ಮೀಕಿ ಸಮುದಾಯದ ರೈತನ ಜಮೀನಲ್ಲಿ ಯುವಕನೋರ್ವ ನೀರು ಕುಡಿದಿದ್ದಾನೆ. ಆತ ಮಾದಿಗ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ವಾಲ್ಮೀಕಿ ಸಮುದಾಯದ ರೈತ ಆಕ್ಷೇಪ ವ್ಯಕ್ತಪಡಿಸಿದ್ದು, ಇದೇ ವಿಚಾರ ಊರೆಲ್ಲಾ ಹಬ್ಬಿ ಈ ಎರಡು ಸಮುದಾಯಗಳ ನಡುವೆ ದೊಡ್ಡ ಗಲಾಟೆ ನಡೆದಿದೆ.


ಪರಸ್ಪರ ಹೊಡೆದಾಡಿಕೊಂಡ ಎರಡು ಗುಂಪುಗಳ ಜನ ಕಲ್ಲು ತೂರಾಟವನ್ನು ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಯಲ್ಲಿ ಎರಡೂ ಗುಂಪಿನ 15 ಜನರಿಗೆ ಗಾಯಗಳಾಗಿದ್ದು, ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ರೋಹನ್ ಜಗದೀಶ ಅವರು ಭೇಟಿ ನೀಡಿದ್ದು, ಸ್ಥಳದಲ್ಲಿ ಮಾಹಿತಿ ಪೊಲೀಸರನ್ನು ನಿಯೋಜಿಸಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST