LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬೆಳಗಾವಿ ನಗರದಲ್ಲಿ ಗುಂಪು ಘರ್ಷಣೆ; ಲಾಠಿ ಪ್ರಹಾರ

ಬೆಳಗಾವಿ, ೨೨:  ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡ ಹಿನ್ನಲೆಯಲ್ಲಿ ಬೆಳಗಾವಿ ನಗರದಲ್ಲಿ ಜರುಗಿದ ಸಂಭ್ರಮಾಚರಣೆಯೊಂದರ ಸಮಯದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು ಪೊಲೀಸರು ಲಾಠಿ ಪ್ರಹಾರ ಮಾಡಿ ಗುಂಪನ್ನು ಚದುರಿಸಿದ ಘಟನೆ ನಡೆದಿದೆ.



ಸೋಮವಾರ ತಡರಾತ್ರಿ ಹಿಂದೂ ಯುವಕರ ಗುಂಪೊಂದು ಜೈ ಶ್ರೀರಾಮ ಘೋಷಣೆಯೊಂದಿಗೆ ಖಡೇಬಜಾರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಟೀಲ ಮಾಳಾ ಬಳಿ ತಿರುಗುತ್ತಿತ್ತು. ಈ ಪ್ರದೇಶದಲ್ಲಿ ಮಸೀದಿಯೊಂದಿದ್ದು ಹೆಚ್ಚಿನ ಪೊಲೀಸ್ ಭದ್ರತೆಗೆ ನಿಯೋಜನೆಗೊಂಡಿದ್ದರು. ಪೊಲೀಸರು ಸೂಚನೆ ನೀಡಿದ್ದರೂ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಗುಂಪು ಘೋಷಣೆ ಕೂಗುತ್ತ ಆ ಪ್ರದೇಶದಲ್ಲಿಯೇ ಸುತ್ತಾಡುತ್ತಿತ್ತು. ಈ ನಡುವೆ ಮೆರವಣಿಗೆ ನಡೆಸಿದವರ ಮೇಲೆ ಕಲ್ಲು ತೂರಾಟ ನಡೆಯಿತು, ಇದಕ್ಕುತ್ತರವಾಗಿ ಮೆರವಣಿಗೆ ನಡೆಸಿದ ಗುಂಪೂ ಸಹ ಕಲ್ಲು ತೂರಾಟ ನಡೆಸಿತು. ಎರಡೂ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದರು.



ಸ್ಥಳದಲ್ಲಿ ಹೆಚ್ಚಿನ ಪೊಲೀಸ ಬಂದೋಬಸ್ತ ನಿಯೋಜಿಸಲಾಗಿದೆ. ಪರಸ್ಥಿತಿ ನಿಯಂತ್ರಣದಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ