LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನಿಷೇಧಿತ ಯೆಮನ್ ದೇಶಕ್ಕೆ ಪ್ರಯಾಣ; ಪ್ರಯಾಣಿಕನ ವಿರುದ್ಧ ದೂರು

ಬೆಂಗಳೂರು: ಭಾರತ ಸರ್ಕಾರದ ಗೆಜೆಟ್ ನೋಟಿಫಿಕೇಷನ್ ಪ್ರಕಾರ ಭಾರತೀಯ ಪ್ರಜೆಯು ಭಾರತೀಯ ಪಾಸ್‌ಪೋರ್ಟ್ ಬಳಸಿಕೊಂಡು ಯಮನ್ ದೇಶಕ್ಕೆ ಪ್ರಯಾಣಿಸುವಂತಿಲ್ಲ. ಇಂಥದೊಂದು ಆದೇಶ ಇದ್ದರೂ ಇಲ್ಲಿನ ಪ್ರಯಾಣಿಕನೊಬ್ಬ ಯಮನ್ ದೇಶಕ್ಕೆ ಪ್ರಯಾಣ ಬೆಳೆಸಿದ್ದರು. ಹೀಗಾಗಿ ಆತನ ಮೇಲೆ ದೂರು ದಾಖಲು ಮಾಡಲಾಗಿದೆ.



ಹೌದು, ಉಡುಪಿ ಮೂಲದ 33 ವರ್ಷದ ಶೇಖ್ ಮಹಮ್ಮದ್ ಸೂಫಿಯಾನ್ ಮೇಲೆ ಇದೀಗ ದೂರು ದಾಖಲಾಗಿದೆ. ಡಿಸೆಂಬರ್ 12 ರಂದು ಶೇಖ್ ಮಹಮ್ಮದ್ ಸೂಫಿಯನ್ ಸುಡಾನ್ ಶಾರ್ಜಾ ಮಾರ್ಗವಾಗಿ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.



2012ರಲ್ಲಿ ಸೌದಿ ಅರೇಬಿಯಾಕ್ಕೆ ಹೋಗಿದ್ದ ಇವರು, ನಜರಾನಲ್ಲಿ ಸೇಲ್ಸ್‌ ಮ್ಯಾನ್ ಕೆಲಸ ಮಾಡುತ್ತಿದ್ದರಂತೆ. ಇವರ ಕಂಪನಿಯ ಬ್ರಾಂಚ್ ಆಫೀಸ್ ಯಮನ್ ದೇಶದ ಅಡೆನ್ನದಲ್ಲಿಯೂ ಇದೆಯಂತೆ. ಹೀಗಾಗಿ ಅಲ್ಲಿಗೆ ಹೋಗಿದ್ದಾರೆ ಎನ್ನಲಾಗಿದೆ.



ಇವರು ಬೆಂಗಳೂರಿಗೆ ಬಂದಾಗ ಯಮನ್ ದೇಶಕ್ಕೆ ಹೋಗಿ ಬಂದಿರೋದು ದಾಖಲಾಗಿದೆ. ಇನ್ನು ಏರ್‌ಪೋರ್ಟ್‌ನ ಇಮಿಗ್ರೇಷನ್ ಅಧಿಕಾರಿಗಳು ಈ ಪ್ರಯಾಣಿಕನ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಹೀಗಾಗಿ ಈ ಪ್ರಯಾಣಿಕನ ವಿರುದ್ಧ ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ