LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆ









ಬೆಂಗಳೂರು, ಏ. 17 : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.


ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಚನ್ನಕೇಶವ ಟಿಂಗರೀಕರಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಲಾಗಿದೆ. ಉಳಿದ ಆರೋಪಿಗಳಿಗೂ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.


ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದು, ಅಪರಾಧಿಗಳಿಂದ ಒಟ್ಟು ₹16 ಲಕ್ಷ ದಂಡ ವಸೂಲಿ ಮಾಡಿ ಅದನ್ನು ಯೋಗೇಶ್ ಗೌಡ ಅವರ ಮಕ್ಕಳಿಗೆ ಹಾಗೂ ಸಹೋದರ ಗುರುನಾಥ್ ಗೌಡ ಅವರಿಗೆ ಪರಿಹಾರವಾಗಿ ನೀಡಲು ಸೂಚಿಸಲಾಗಿದೆ.


ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳನ್ನು ಏಪ್ರಿಲ್ 15ರಂದು ದೋಷಿಗಳೆಂದು ಘೋಷಿಸಲಾಗಿತ್ತು. ಶಿಕ್ಷೆಯ ಪ್ರಮಾಣ ಕುರಿತು ವಾದ-ಪ್ರತಿವಾದ ಆಲಿಸಿದ ಬಳಿಕ ಏಪ್ರಿಲ್ 17ರಂದು ಅಂತಿಮ ಶಿಕ್ಷೆ ಪ್ರಕಟಿಸಲಾಗಿದೆ.


ಸಿಬಿಐ ಪರ ವಕೀಲರು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ವಾದ ಮಂಡಿಸಿದ್ದರೆ, ಆರೋಪಿಗಳ ಪರ ವಕೀಲರು ಶಿಕ್ಷೆ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಎರಡೂ ವಾದಗಳನ್ನು ಆಲಿಸಿದ ನ್ಯಾಯಾಲಯ ಅಂತಿಮವಾಗಿ ಜೀವಾವಧಿ ಶಿಕ್ಷೆ ವಿಧಿಸಿದೆ.


2016ರ ಜೂನ್‌ನಲ್ಲಿ ನಡೆದ ಈ ಕೊಲೆ ಪ್ರಕರಣದ ವಿಚಾರಣೆ ಸುಮಾರು 8 ವರ್ಷಗಳ ಕಾಲ ನಡೆಯಿತು. ಪ್ರಕರಣದಲ್ಲಿ 2 ರಿಂದ 16 ಹಾಗೂ 18ನೇ ಆರೋಪಿಗಳು ಕೊಲೆ, ಅಪರಾಧಿಕ ಒಳಸಂಚು ಹಾಗೂ ಸಾಕ್ಷ್ಯ ನಾಶ ಆರೋಪಗಳಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಮಾನಿಸಿದೆ.


ಇದಲ್ಲದೆ ಅಕ್ರಮ ಕೂಟ, ಗಲಭೆ ಹಾಗೂ ಆಯುಧಗಳಿಂದ ದಾಳಿ ಸೇರಿದಂತೆ ವಿವಿಧ ಕಲಂಗಳಡಿ ಆರೋಪಿಗಳು ಶಿಕ್ಷೆಗೆ ಗುರಿಯಾಗಿದ್ದಾರೆ. 19ನೇ ಆರೋಪಿಯಾದ ಟಿಂಗರೀಕರ್ ಸಾರ್ವಜನಿಕ ಸೇವೆಯಲ್ಲಿದ್ದು ತಪ್ಪು ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ನೆರವಾದ ಪ್ರಕರಣದಲ್ಲೂ ಶಿಕ್ಷೆ ವಿಧಿಸಲಾಗಿದೆ.


ಪ್ರಕರಣದ ಮೊದಲನೇ ಆರೋಪಿ ಬಸವರಾಜ್ ಮುತ್ತಗಿ ಮತ್ತು 17ನೇ ಆರೋಪಿ ಶಿವಾನಂದ್ ಅವರನ್ನು ಮಾಫಿ ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ. 20ನೇ ಮತ್ತು 21ನೇ ಆರೋಪಿಗಳನ್ನು ನ್ಯಾಯಾಲಯ ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ.















Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ