LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Health & Fitness

1 ವಾರದಿಂದ ರಾಜ್ಯದಲ್ಲಿ ಕೊರೋನಾ ಹೆಚ್ಚಳ; ಸೋಮವಾರ ತಜ್ಞರ ಸಭೆ

ಬೆಂಗಳೂರು: ಕಳೆದ 1 ವಾರದಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು ಆರೋಗ್ಯ ಸಚಿವರು ಸೋಮವಾರ ತುರ್ತು ಸಭೆ ನಡೆಸಲಿದ್ದಾರೆ.



ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ರವಿವಾರ ವಿಧಾನಸೌಧ ಆವರಣದಲ್ಲಿ​ ಸೈಕಲ್ ಜಾಥಾಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಎಚ್​​3ಎನ್​2 ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚಿಸಿ ನಾಳಿನ ಸಭೆಯ ಎಲ್ಲಾ ಮಾಹಿತಿ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.



ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ದಿನದಿಂದ ದಿನ ಏರಿಕೆ ಕಂಡು ಬರುತ್ತಿದೆ. ಮಾರ್ಚ 4 ರಂದು ರಾಜ್ಯದಲ್ಲಿ 95 ಹಾಗೂ ಬೆಂಗಳೂರಿನಲ್ಲಿ 79 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 100 ದಿನಗಳ ನಂತರ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 391 ಸಕ್ರಿಯ ಪ್ರಕರಣಗಳು ಇದ್ದು, ವಾರದಲ್ಲಿ ಕೋವಿಡ್ ಖಚಿತ ಪ್ರಕರಣ ಶೇಕಡವಾರು ಪ್ರಮಾಣ 2.44ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.



ಎಚ್​​3ಎನ್​2 ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಈ ಸಂಬಂಧ ಮಾ.6 ರಂದು ಅಧಿಕಾರಿಗಳು ಮತ್ತು ತಜ್ಞರ ಜತೆ ಸಭೆ ನಡೆಸಲಾಗುತ್ತದೆ. ರೋಗ ಲಕ್ಷಣದಿಂದಾಗಿ ಕೆಮ್ಮು ಉಂಟಾಗಿರುವ ಮಾಹಿತಿ ಇದೆ. ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ