LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭ್ರಷ್ಟಾಚಾರ, ಕೊಳಕು ರಸ್ತೆ, ಮಾಲಿನ್ಯ ಭಾರತದ ವಾಸ್ತವ -ನಾರಾಯಣ ಮೂರ್ತಿ

ಹೈದರಾಬಾದ:  ಹದಗೆಟ್ಟಿರುವ ಭಾರತದ ಪ್ರಸ್ತುತ ಪರಿಸ್ಥಿತಿಯನ್ನು ಸುಧಾರಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಹೊರಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ದೇಶದ ಹೊಸ ವಾಸ್ತವವನ್ನು ಸೃಷ್ಟಿಸುವುದು ನಿಮ್ಮ ಹೊಣೆಗಾರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.





ಭಾರತದ ವಾಸ್ತವದ ಸಂಗತಿ ಏನೆಂದರೆ ಭ್ರಷ್ಟಾಚಾರ, ಕೊಳಕು ರಸ್ತೆಗಳು ಮತ್ತು ಮಾಲಿನ್ಯ ಸೇರಿದಂತೆ ಇನ್ನಿತರ ವಿಚಾರಗಳು ಆಗಿವೆ. ಸಿಂಗಾಪುರ ಎಂದರೆ ಸ್ವಚ್ಛ ರಸ್ತೆಗಳು ಮತ್ತು ಮಾಲಿನ್ಯ ರಹಿತವಾಗಿರುವ ಪರಿಸರ ಎಂಬುದಾಗಿದೆ ಎಂದು ನಾರಾಯಣ ಮೂರ್ತಿ ಹೇಳಿದರು.



ಅವರು ವಿಜಯನಗರಂ ಜಿಲ್ಲೆಯ ರಾಜಮನಲ್ಲಿರುವ ಜಿಎಂಆರ್ ಇನಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಜಿಎಂಆರ್ ಐಟಿ)ಯ ರಜತ ಮಹೋತ್ಸವ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಭಾರತದ ನೂತನ ವಾಸ್ತವವನ್ನು ಸೃಷ್ಟಿಸುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲಿದೆ ಎಂದರು.



ದೇಶದ ಈ ನ್ಯೂನತೆಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು, ಬದಲಾವಣೆ ಪರ್ವದತ್ತ ಹೆಜ್ಜೆ ಹಾಕಬೇಕಾಗಿದೆ. ನೀವೇ ನಾಯಕ ಎಂದು ಕಲ್ಪಿಸಿಕೊಳ್ಳಿ, ಜವಾಬ್ದಾರಿ ಹೊರಲು ಇನ್ನೊಬ್ಬರಿಗಾಗಿ ಕಾಯಬೇಡಿ. ನೀವು ಏನು ಮಾಡುತ್ತೀರಿ ಎಂಬುದೇ ವಾಸ್ತವವಾಗಿದೆ  ಎಂದು ನಾರಾಯಣ ಮೂರ್ತಿ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.



ಸಮಾಜದಲ್ಲಿ ಬದಲಾವಣೆ ತರಬೇಕು ಎಂಬ ಮನೋಭಾವ ಯುವಪೀಳಿಗೆಯಲ್ಲಿ ಮೂಡಬೇಕಾಗಿದೆ. ನಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ದೇಶ ಮತ್ತು ಸಮಾಜ ಮೊದಲು ಎಂಬ ಭಾವನೆ ಬೆಳೆಸಿಕೊಳ್ಳಬೇಕು ಎಂದು ನಾರಾಯಣಮೂರ್ತಿ ಸಲಹೆ ನೀಡಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ