LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ

ಹೊಸದಿಲ್ಲಿ, ಸೆ. 16 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಹಲವು ನಿಲುವುಗಳಿಗೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸುತ್ತ ಬಂದಿರುವ ಹಾಗೂ ಇತ್ತೀಚೆಗೆ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್‌ ಪ್ರಶ್ನೆ ಪತ್ರಿಕೆಗಳ ಸೋರಿಕೆ ವಿರುದ್ಧ ಭುಗಿಲೆದ್ದಿದ್ದ  ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಟೀಕಿಸಿದ್ದ ಕನ್ನಡದ ಹಿರಿಯ ನಟ ಅನಂತ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 2024ನೇ ಸಾಲಿನ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ.

ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಹಾಗೂ ವೈವಿಧ್ಯಮಯ ಪಾತ್ರಗಳ ಮೂಲಕ ಹಲವು ತಲೆಮಾರುಗಳ ಪ್ರೇಕ್ಷಕರ ಮನಗೆದ್ದಿರುವ ಅನಂತ ನಾಗ್ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರ ಬುಧವಾರ ಈ ಘೋಷಣೆ ಮಾಡಿದೆ.

ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕತಾ ನಗರದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

1948ರ ಸೆಪ್ಟೆಂಬರ್ 4ರಂದು ಜನಿಸಿದ ಅನಂತ ನಾಗ್ ಐದು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಎನ್ನಲಾಗಿದೆ. ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಅವರು ಕನ್ನಡದ ಜತೆಗೆ ವಿವಿಧ ಭಾಷೆಗಳ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ. ದೂರದರ್ಶನದ ಜನಪ್ರಿಯ ‘ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿನ ಅವರ ಅಭಿನಯವೂ ವ್ಯಾಪಕ ಮೆಚ್ಚುಗೆ ಪಡೆದಿತ್ತು.

ಅನಂತ ನಾಗ್ ಅವರಿಗೆ 2025ರಲ್ಲಿ ಕೇಂದ್ರ ಸರಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದೀಗ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯೂ ಅವರ ಮುಡಿಗೇರಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅನಂತ ನಾಗ್ ಅವರನ್ನು ಅಭಿನಂದಿಸಿದ್ದು, ಹಲವು ದಶಕಗಳಿಂದ ಅವರ ಸಹಜ ಅಭಿನಯ, ವೈವಿಧ್ಯಮಯ ಪಾತ್ರ ನಿರ್ವಹಣೆ ಮತ್ತು ಕಲಾ ಪ್ರತಿಭೆ ಭಾರತೀಯ ಚಿತ್ರರಂಗದಲ್ಲಿ, ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಮಹತ್ವದ ಛಾಪು ಮೂಡಿಸಿದೆ ಎಂದು ಹೇಳಿದ್ದಾರೆ.

1969ರಲ್ಲಿ ಸ್ಥಾಪಿಸಲಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಭಾರತೀಯ ಚಿತ್ರರಂಗದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಜೀವಮಾನದ ವಿಶಿಷ್ಟ ಕೊಡುಗೆ ನೀಡಿದ ಸಾಧಕರಿಗೆ ನೀಡಲಾಗುವ ದೇಶದ ಅತ್ಯುನ್ನತ ಚಲನಚಿತ್ರ ಗೌರವವಾಗಿದೆ.

ಕನ್ನಡ ಚಿತ್ರರಂಗದ ಮೇರುನಟ ಡಾ. ರಾಜಕುಮಾರ ಅವರ ಬಳಿಕ ಹಿರಿಯ ನಟ ಅನಂತ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದಿದೆ. ಡಾ. ರಾಜಕುಮಾರ ಅವರಿಗೆ 1995ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿತ್ತು. ಇದೀಗ ಸುಮಾರು ಮೂರು ದಶಕಗಳ ಬಳಿಕ ಕನ್ನಡ ಚಿತ್ರರಂಗದ ನಟ ಅನಂತ ನಾಗ್ ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ರಾಜಕುಮಾರ ಬಳಿಕ ಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಸಮವಸ್ತ್ರದಲ್ಲಿದ್ದ ಪೊಲೀಸರು; ಇಬ್ಬರ ವರ್ಗಾವಣೆಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಣಿಯಬೇಡಿ: ರಾಹುಲ್ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಡಾ. ಜಿ. ಪರಮೇಶ್ವರಶಿಸ್ತು, ಜಾಗೃತಿಯಿಂದ ಗಣೇಶೋತ್ಸವ ಆಚರಿಸಿ: ಮೇಯರ್ ಪ್ರೀತಿ ಕಾಮಕರ್ಆಸ್ತಿ ಹಂಚಿಕೆ ವಿವಾದ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ, ವಕೀಲ ಪುತ್ರಿಯ ಬರ್ಬರ ಹತ್ಯೆಯುಪಿಐ ಶುಲ್ಕ ಜನರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್’: ಸಚಿವ ಶಿವರಾಜ ತಂಗಡಗಿ ಟೀಕೆ‘ವಂದೇ ಮಾತರಂ’ ಪೂರ್ಣ ಹಾಡಿದರೆ ರಾಜೀನಾಮೆ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲುರೈಲ್ವೆ ಯೋಜನೆಗೆ ಭೂಸ್ವಾಧೀನ: ಎಕರೆಗೆ ₹1 ಕೋಟಿ ಪರಿಹಾರಕ್ಕೆ ರೈತರ ಆಗ್ರಹ