LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಾಳೆಯಿಂದ ರಾಜ್ಯದಲ್ಲಿ ದೆಹಲಿ ಮಾದರಿ ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರು, ೧೩- ದಿಲ್ಲಿಯ ಆಮ್ ಆದ್ಮಿ ಸರ್ಕಾರ ತಂದಿರುವ ಯಶಸ್ವಿ ಮೊಹಲ್ಲಾ ಕ್ಲಿನಿಕ್ ತರಹಾ ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.



ರಾಜ್ಯದಲ್ಲಿ 2023ರ ಜನವರಿ ಅಂತ್ಯದ ವೇಳೆಗೆ ಒಟ್ಟು 438 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಅಂದರೆ ಡಿಸೆಂಬರ್ 14ರ ನಾಳೆಯಿಂದ 114 ‘ನಮ್ಮ ಕ್ಲಿನಿಕ್’ ಗಳು ಕಾರ್ಯ ನಿರ್ವಹಿಸಲಿವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ ಈ ವಿಷಯ ತಿಳಿಸಿದ್ದಾರೆ.



ರಾಜ್ಯದಲ್ಲಿ ಆರಂಭವಾಗಲಿರುವ ಒಟ್ಟು 438 ನಮ್ಮ ಕ್ಲಿನಿಕ್ ಗಳ ಪೈಕಿ, ಬಾಗಲಕೋಟ 18, ಬಳ್ಳಾರಿ 11, ಬೆಳಗಾವಿ 21, ವಿಜಯನಗರ 6, ಬೆಂಗಳೂರು ಗ್ರಾಮಾಂತರ 9, ಬೀದರ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3 ಹಾಗೂ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿವೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು