LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆರು ತಿಂಗಳಲ್ಲೇ ಬಿಜೆಪಿಯವರು ಪೋಲೀಸರ ಮೇಲೆ ನಂಬಿಕೆ ಕಳೆದುಕೊಂಡರೇ?

ಬೆಳಗಾವಿ, 5:  ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಲ್ಲೆ ವಿಚಾರ ಗಮನಕ್ಕೆ ಬಂದಿದ್ದು ಪೊಲೀಸರು ತನಿಖೆ ಮಾಡಿ ವರದಿ ನೀಡುತ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.



ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪೃಥ್ವಿ ಸಿಂಗ್ ಯಾರು, ಅವರ ಹಿನ್ನಲೆ ಏನು, ಚಾಕುವಿನಿಂದ ಯಾಕೆ ಹಲ್ಲೆ ಮಾಡಲಾಗಿದೆ ಎನ್ನುವುದು ತನಿಖೆ ಮೂಲಕ ಗೊತ್ತಾಗಬೇಕಿದೆ. ಪೊಲೀಸರು ತನಿಖೆ ಮಾಡುತ್ತಿದ್ದು ಅವರ ವರದಿ ನೀಡಿದ ಮೇಲೆ ಮುಂದಿನ ಆ ಬಗ್ಗೆ ತಿಳಿಸುವುದಾಗಿ ಅವರು ಹೇಳಿದರು.



ಸೋಮವಾರ ರಾತ್ರಿ ಪೃಥ್ವಿ ಸಿಂಗ್ ಚಿಕಿತ್ಸೆ ಪಡೆಯುತ್ತಿರುವ ಕೆಎಲ್ ಇ ಆಸ್ಪತ್ರೆಗೆ ಭೆಟ್ಟಿ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು "ಪೋಲೀಸರ ಮೇಲೆ ನಮಗೆ ನಂಬಿಕೆಯಿಲ್ಲ" ಎಂದು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, "ಅದೊಂದು ರಾಜಕೀಯ ಹೇಳಿಕೆ, ಆರು ತಿಂಗಳ ಹಿಂದೆ ಅವರಿಗೆ ಪೋಲೀಸರ ಮೇಲೆ ಪೂರ್ಣ ನಂಬಿಕೆ, ಭರವಸೆ ಇತ್ತು. ಇಷ್ಟು ಬೇಗ ಅವರು ನಂಬಿಕೆ ಕಳೆದುಕೊಂಡರೇ, ಇದಕ್ಕೇನು ಏನು ಕಾರಣ, ಯಾರ ಮೇಲೆ ಬಿಜೆಪಿಯವರಿಗೆ ನಂಬಿಕೆಯಿದೆ? ಎಂದು ಪ್ರಶ್ನಿಸಿದರು.



ಬಿಜೆಪಿಯವರಿಗೆ ಪೋಲೀಸರ ಮೇಲೆ ತಮಗೆ ಬೇಕಾದಾಗ ನಂಬಿಕೆ ಇರುತ್ತೆ, ಬೇಡವಾದಾಗ ನಂಬಿಕೆ ಇರೊಲ್ಲ. ಕಾನೂನು ಎಲ್ಲರಿಗೂ ನ್ಯಾಯವನ್ನು ಒದಗಿಸುವ ಕಾರ್ಯ ಮಾಡುತ್ತಿದೆ ಅವರ ಮೇಲೆ ನಂಬಿಕೆ ಇಡಬೇಕಾಗುತ್ತದೆ ಎಂದು ಗೃಹ ಮಂತ್ರಿ ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ