LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕಾರ್ಯಗಳಿಂದ ಶ್ರೀಮಠಕ್ಕೆ ವಿಭಿನ್ನ ಹಿನ್ನೆಲೆ

ಹಾವೇರಿ: ಶ್ರೀ ಮಠದ ಭಕ್ತರು ಆರೋಗ್ಯವಂತರು, ವಿನಯಶೀಲರು, ಸದ್ಗುಣಿಗಳು ಹಾಗೂ ಸಂಸ್ಕಾರವಂತರು ಆಗಬೇಕಿರುವ ನಿಟ್ಟಿನಲ್ಲಿ ರೂಪಿಸಿರುವ ದುಶ್ಚಟಗಳ ಭಿಕ್ಷೆ ಸದ್ಗುಣಗಳ ದೀಕ್ಷೆ ಅಭಿಯಾನ ಯಶಸ್ವಿಯಾಗಿರುವುದು ಅಭಿಮಾನ ಮೂಡಿಸಿದೆ ಎಂದು ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹೇಳಿದರು.

ನಗರದ ಗದಿಗೇರ ಓಣಿ, ಯರೇಶಿಮಿ ಓಣಿ ಹಾಗೂ ಮೇಲಿನಪೇಟೆಯಲ್ಲಿ ಜರುಗಿದ ಪಾದಯಾತ್ರೆ ಬಳಿಕ ಮಾತನಾಡಿದ ಅವರು, ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಂದ ಶ್ರೀಮಠಕ್ಕೆ ವಿಭಿನ್ನ ಹಿನ್ನೆಲೆ ಇದೆ. ಇಂಥ ಪರಂಪರೆಯ ಮಠದ ಭಕ್ತರು ದುಶ್ಚಟಗಳಿಂದ ಆರ್ಥಿಕ ಹಾಗೂ ಕೌಟುಂಬಿಕ ಸಂಕಷ್ಟ ಎದುರಿಸಬಾರದು. ಇದೇ ಕಾರಣಕ್ಕೆ ತಾಲೂಕಿನ 70 ಹಳ್ಳಿಗಳಲ್ಲಿ ಜನ ಜಾಗೃತಿ ರಥ ಸಂಚರಿಸಿದೆ. ಜೊತೆಗೆ ಇದೇ ತಿಂಗಳು 27ರಂದು ನಗರದ ಮುನ್ಸಿಪಲ್ ಮೈದಾನದಲ್ಲಿ 51 ಸಾವಿರ ಭಕ್ತರಿಂದ ವಚನ ಪಠಣ ಜರುಗಲಿದೆ. ಇಂಥ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ ಸಂಸ್ಕಾರ ರೂಪಿಸಲು ಶ್ರೀ ಮಠ ಹೆಮ್ಮೆ ಪಡುತ್ತದೆ ಎಂದರು.

ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಬಸವ ಭಕ್ತರಿಂದ ಭಾರತಾಂಬೆಯ ತ್ರಿವರ್ಣ ಧ್ವಜದ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಬಟ್ಟೆಯಿಂದ ಆವೃತವಾದ ಬುಟ್ಟಿಯೊಂದಿಗೆ ಬಸವ ಬುತ್ತಿ ಜರುಗಲಿದೆ. ಜಾತಿ, ಮತ ಮತ್ತು ಪಂಥ ಭೇದವಿಲ್ಲದೆ ನಡೆಯುವ ಜಾತ್ರೆಗೆ ನಾಡಿನ ವಿವಿಧ ಭಾಗದ 111ಕ್ಕೂ ಹೆಚ್ಚು ಸ್ವಾಮೀಜಿಯವರು ಪಾಲ್ಗೊಳ್ಳುವರು. ಈ ಹಿನ್ನೆಲೆಯಲ್ಲಿ ಸ್ಥಳೀಯರಾದ ತಾವೂ ತಮ್ಮ ಬಂಧು ಮಿತ್ರರನ್ನು ಆಹ್ವಾನಿಸಿ ಯಶಸ್ವಿಗೊಳಿಸಬೇಕು. ಅಷ್ಟೇ ಅಲ್ಲದೇ ಬಡ ಮಕ್ಕಳ ಕಲ್ಯಾಣಕ್ಕಾಗಿ ವಿನಿಯೋಗಿಸಲು ಸದಾಶಿವ ಸ್ವಾಮೀಜಿಯವರ ಬೆಳ್ಳಿ ತುಲಾಭಾರಕ್ಕೆ ತಾವು ದಾನದ ರೂಪದಲ್ಲಿ ಸಹಕಾರ ನೀಡಬೇಕು ಎಂದರು.

ಶೇಗುಣಸಿಯ ಡಾ.ಮಹಾಂತಪ್ರಭು ಸ್ವಾಮೀಜಿ ಮಾತನಾಡಿ, ಹಸಿದ ಹೊಟ್ಟೆಗೆ ಅನ್ನ, ಜ್ಞಾನ ಹಾಗೂ ಸಂಸ್ಕಾರ ನೀಡಿದ ಹೆಗ್ಗಳಿಕೆ ಹುಕ್ಕೇರಿ ಮಠದ್ದು. ನಮ್ಮೂರ ಜಾತ್ರೆಯನ್ನು ಯಶಸ್ವಿಗೊಳಿಸಲು ನಿಷ್ಕಲ್ಮಶ ಭಕ್ತಿ ಸಾಕು. ಸಾವಿರಾರು ಮಕ್ಕಳನ್ನು ಸಲಹುತ್ತಿರುವ ಸದಾಶಿವ ಶ್ರೀಗಳು ಸರ್ವರಿಗೂ ದಾಸೋಹ ವ್ಯವಸ್ಥೆ ಕಲ್ಪಿಸಿರುವರು. ಅನ್ನದ ಬೆಲೆ ಅರಿತು ಅದನ್ನು ಕೆಡಿಸುವ ಪ್ರಯತ್ನ ಸಲ್ಲದು ಎಂದರು.

ಇದೇ ಸಂದರ್ಭದಲ್ಲಿ ಭಕ್ತರಿಗೆ ರುದ್ರಾಕ್ಷಿ ವಿತರಿಸಲಾಯಿತು.

ವೀರಭದ್ರ ದೇವರು ಕಾರ್ಯಕ್ರಮ ನಿರ್ವಹಿಸಿದರು.

ವಿಜಯಪುರದ ಘನಲಿಂಗ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಸ್ವಾಮೀಜಿ, ಕೂಡಲದ ಗುರು ಮಹೇಶ್ವರ ಸ್ವಾಮೀಜಿ, ಮಾದನ ಹಿಪ್ಪರಗಿಯ ಅಭಿನವ ಶಿವಲಿಂಗ ಸ್ವಾಮೀಜಿ, ರಾವೂರಿನ ಸಿದ್ಧಲಿಂಗ ಸ್ವಾಮೀಜಿ, ಕರಬಸಪ್ಪ ಹಲಗಣ್ಣವರ, ಪ್ರಭು ಹಿಟ್ನಳ್ಳಿ, ಲಿಂಗರಾಜ ಯರೇಶಿಮಿ, ಚಂದ್ರು ಗದಗಿ, ಶಿವರಾಜ ಮತ್ತೂರ, ಶಿವರಾಜ ಗಾಳಿ, ಸಿದ್ದು ಬೆಳ್ಳಟ್ಟಿ, ರೇಣುಕಾ ಪುತ್ರನ್, ಅನಸೂಯಾ ನಂದಿವಾಡ ಹಾಗೂ ಶಿವಜ್ಯೋತಿ ಮಹಿಳಾ ಮಂಡಳದ ಸದಸ್ಯರು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು