LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬೆಳಗಾವಿ ಅಧಿವೇಶನ: ಅಗತ್ಯ ವಸತಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಬೆಳಗಾವಿ : ವಿಧಾನಮಂಡಳದ ಚಳಿಗಾಲ ಅಧಿವೇಶನ ಡಿ.19 ರಿಂದ 30 ರವರೆಗೆ ನಡೆಯಲಿದ್ದು, ಸಚಿವರು, ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಪ್ರತಿವರ್ಷದಂತೆ ಅತ್ಯುತ್ತಮ ವಸತಿ ಮತ್ತಿತರ ಸೌಕರ್ಯಗಳನ್ನು ಒದಗಿಸುವ ಅಗತ್ಯವಿದೆ. ಆದ್ದರಿಂದ ಈ ನಿಟ್ಟಿನಲ್ಲಿ ನಗರದ ಎಲ್ಲ ಹೋಟೆಲ್ ಮಾಲೀಕರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.



ಬೆಳಗಾವಿ ಚಳಿಗಾಲ ವಿಧಾನಮಂಡಳ ಅಧಿವೇಶನದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶನಿವಾರ ನಡೆದ ನಗರದ ಹೋಟೆಲ್ ಮಾಲೀಕರುಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.







ಅಧಿವೇಶನ ಆರಂಭಕ್ಕೆ ಸರಿಯಾಗಿ ಒಂದು ತಿಂಗಳು ಕಾಲಾವಕಾಶ ಇರುವುದರಿಂದ ಸ್ವಚ್ಛತೆ ಮತ್ತಿತರ ಕೆಲಸಗಳಿಗೆ ಆದ್ಯತೆ ನೀಡಬೇಕು. ಅತಿಥಿಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಉತ್ತಮ ಸೇವೆಯನ್ನು ಒದಗಿಸಲು ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.



ಚಳಿಗಾಲ ಅಧಿವೇಷ ಅವಧಿಯಲ್ಲಿ ಎಲ್ಲ ಹೋಟೆಲ್ ಕೊಠಡಿಗಳನ್ನು ಜಿಲ್ಲಾಡಳಿತ ಪಡೆದುಕೊಳ್ಳುವುದರಿಂದ ಆ ಅವಧಿಯಲ್ಲಿ ಕೊಠಡಿಗಳನ್ನು ಬೇರೆಯವರಿಗೆ ಬುಕ್ ಮಾಡಬಾರದು. ಸಚಿವರು, ಶಾಸಕರು, ಗಣ್ಯರು, ಉನ್ನತ ಅಧಿಕಾರಿಗಳು ಆಗಮಿಸಲಿದ್ದು, ಎಲ್ಲರಿಗೂ ಸಮರ್ಪಕ ವಸತಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲ ಹೋಟೆಲ್ ಮಾಲೀಕರು ಸಹಕರಿಸಬೇಕು ಎಂದರು.



ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಮತ್ತಿತರರು ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ