LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಅವಘಡ: 150ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ

ಬೆಂಗಳೂರು, ನ. 11:  ಬೆಂಗಳೂರಿನಲ್ಲಿ ಪಟಾಕಿ ಸಿಡಿತದಿಂದ 150ಕ್ಕೂ ಹೆಚ್ಚು ಮಂದಿ ಕಣ್ಣಿನ ಗಾಯಗಳಿಗೆ ಒಳಗಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ, ಗರ್ಭಿಣಿ ಸೇರಿದಂತೆ ಆರು ಮಂದಿ ಸುಟ್ಟ ಗಾಯಗಳಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಗಂಭೀರವಾಗಿ ಗಾಯಗೊಂಡ ಇಬ್ಬರಿಗೆ ಬುಧವಾರ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅಶೋಕನಗರದ 30 ವರ್ಷದ ಯುವಕನೊಬ್ಬ ಪಟಾಕಿ ಸಿಡಿಸುವ ಸ್ಥಳದ ಸಮೀಪ ನಿಂತಿದ್ದಾಗ ಕಣ್ಣಿಗೆ ಗಂಭೀರ ಗಾಯವಾಗಿದೆ. ಕಣ್ಣಿನ ಹೊರಪದರ ಹರಿದಿರುವುದರಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ದೃಷ್ಟಿ ಮರಳುವ ಸಾಧ್ಯತೆ ಕುರಿತು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಹೊಸಕೋಟೆಯಲ್ಲಿ ವಾಸವಾಗಿರುವ ಉತ್ತರ ಪ್ರದೇಶ ಮೂಲದ ನಾಲ್ಕು ವರ್ಷದ ಬಾಲಕನಿಗೂ ಚಕ್ರಿ ಹಾಗೂ ಬಿಜಿಲಿ ಪಟಾಕಿಯಿಂದ ಕಣ್ಣಿಗೆ ಗಂಭೀರ ಗಾಯವಾಗಿದೆ. ಕಣ್ಣಿನ ಪ್ರಮುಖ ಭಾಗಕ್ಕೆ ಹಾನಿಯಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ

ನಗರದ ನಾರಾಯಣ ನೇತ್ರಾಲಯದಲ್ಲಿ 51, ಮಿಂಟೋ ಆಸ್ಪತ್ರೆಯಲ್ಲಿ 36, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 26, ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 15, ಬೆಂಗಳೂರು ನೇತ್ರಾಲಯದಲ್ಲಿ 6, ಮೋದಿ ಕಣ್ಣಿನ ಆಸ್ಪತ್ರೆಯಲ್ಲಿ 5 ಹಾಗೂ ಅಗ್ರವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ. ಇತರ ಆಸ್ಪತ್ರೆಗಳಲ್ಲಿಯೂ 20ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.

ಪಟಾಕಿ ಅವಘಡಗಳಲ್ಲಿ ಗಾಯಗೊಂಡವರಲ್ಲಿ ಮಕ್ಕಳು ಹಾಗೂ ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದವರೂ ಸೇರಿದ್ದಾರೆ. ಕೆಲವರಿಗೆ ಕಣ್ಣಿನ ಹೊರಪದರಕ್ಕೆ ಗಾಯವಾಗಿದ್ದರೆ, ಇನ್ನೂ ಕೆಲವರಿಗೆ ದೃಷ್ಟಿಗೆ ಹಾನಿಯಾಗುವಂತಹ ಗಂಭೀರ ಗಾಯಗಳಾಗಿವೆ.

ಗರ್ಭಿಣಿಗೆ ಗಂಭೀರ ಗಾಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಲ್ವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 21 ವರ್ಷದ ಗರ್ಭಿಣಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಿಳೆ ತೊಡೆಯ ಮೇಲೆ ಪಟಾಕಿಗಳ ಪೆಟ್ಟಿಗೆ ಇಟ್ಟುಕೊಂಡಿದ್ದಾಗ ಆಕಸ್ಮಿಕವಾಗಿ ಕಿಡಿ ತಗುಲಿ, ಪೆಟ್ಟಿಗೆಯಲ್ಲಿದ್ದ ಪಟಾಕಿಗಳೆಲ್ಲ ಒಮ್ಮೆಲೆ ಸಿಡಿದಿವೆ. ಪರಿಣಾಮ ಗಂಭೀರ ಸುಟ್ಟ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳಲ್ಲಿ 9, 11 ಮತ್ತು 14 ವರ್ಷದ ಮೂವರು ಬಾಲಕರು, 9 ವರ್ಷದ ಬಾಲಕಿ ಹಾಗೂ 21 ಮತ್ತು 27 ವರ್ಷದ ಇಬ್ಬರು ಮಹಿಳೆಯರಿದ್ದಾರೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳೂ ಪಟಾಕಿ ಅವಘಡಕ್ಕೆ ತುತ್ತಾಗಿದ್ದಾರೆ. ಮೂವರು ಮಕ್ಕಳ ಮುಖದ ಚರ್ಮ ಸುಟ್ಟಿದೆ.

ಆರು ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ವಿಭಾಗದ ಮುಖ್ಯಸ್ಥ ಡಾ. ಎನ್.ಎ. ಯೋಗೇಶ್ವರಪ್ಪ ತಿಳಿಸಿದ್ದಾರೆ.

ಪಟಾಕಿ ಸಿಡಿಸುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸದಿದ್ದರೆ ಗಂಭೀರ ಗಾಯಗಳಾಗುವುದರ ಜೊತೆಗೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳುವ ಅಪಾಯವೂ ಇದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು, ಶೋಷಿತರ ಆಕ್ರೋಶ: ಬೆಳಗಾವಿ ಅಧಿವೇಶನದಲ್ಲಿ ಭರವಸೆ ಈಡೇರಿಸಲು ಗಡುವುಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್