LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸದನದ ಹೊಸ್ತಿಲಿಗೆ ಶಿರಬಾಗಿ ಡಿ.ಕೆ.ಶಿವಕುಮಾರ ನಮನ

ಬೆಂಗಳೂರು, ಆಗಸ್ಟ್ 13: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ನೂತನ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನದ ಕಲಾಪ ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯ ಮೊದಲ ದಿನದ ಕಲಾಪಕ್ಕೆ ಗೈರಾಗಿರುವುದು ಗಮನ ಸೆಳೆಯಿತು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸದನ ಪ್ರವೇಶಿಸುವ ಮುನ್ನ ಬಾಗಿಲಿಗೆ ನಮಸ್ಕರಿಸಿದರು. ಬಳಿಕ ಮುಖ್ಯಮಂತ್ರಿಗೆ ಮೀಸಲಾಗಿರುವ ಪೀಠದ ಬಳಿಗೆ ತೆರಳಿ ಅದಕ್ಕೂ ಶಿರಬಾಗಿ ನಮಸ್ಕರಿಸಿದರು.

ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯಲಾಗುವ ವಿಧಾನಸಭೆಯ ಪೀಠಕ್ಕೆ ಗೌರವ ಸಲ್ಲಿಸುವ ಮೂಲಕ ಡಿ.ಕೆ.ಶಿವಕುಮಾರ ಅವರು ತಮ್ಮ ಮೊದಲ ಅಧಿವೇಶನದ ದಿನವನ್ನು ಆರಂಭಿಸಿದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಕೋಟ್ಯಾಂತರ ಕನ್ನಡಿಗರ ಆಶೀರ್ವಾದದೊಂದಿಗೆ, ಪ್ರಜಾಪ್ರಭುತ್ವದ ಆಶಯಕ್ಕೆ ಶಿರಬಾಗಿ ಸದನಕ್ಕೆ ಮುಖ್ಯಮಂತ್ರಿಯಾಗಿ ನನ್ನ ಮೊದಲ ಹೆಜ್ಜೆ’ ಎಂದು ಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಗೈರು: ನೂತನ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನದ ಮೊದಲ ದಿನದ ಕಲಾಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸದನದಲ್ಲಿ ಅವರ ಅನುಪಸ್ಥಿತಿ ಗಮನ ಸೆಳೆಯಿತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ