LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಚಿನ್ನದ ಆಸೆಗಾಗಿ ವೈದ್ಯನ ಕೊಲೆ: 24 ಗಂಟೆಯೊಳಗೆ ಹಂತಕನ ಬಂಧನ

ಶಿರಸಿ, ಏಪ್ರಿಲ್‌ 21 : ಮದುವೆ ಸಿದ್ಧತೆಯಲ್ಲಿದ್ದ ವೈದ್ಯನನ್ನು ಚಿನ್ನದ ಆಸೆಗೆ ಕೊಲೆಗೈದ ಪ್ರಕರಣವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಭೇದಿಸಿ, ಆರೋಪಿಯನ್ನು ಬಂಧಿಸಿದ್ದಾರೆ.


ಡಾ. ರಮೇಶ ಕಲಗುಟಕರ (51) ಹತ್ಯೆ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮಂಜುನಾಥ ಪಿ.ಎಲ್‌. (70) ಬಂಧಿತನಾಗಿದ್ದು, ಆರೋಪಿಯಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ₹50 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೆ ಬಳಸಿದ ಕಬ್ಬಿಣದ ರಾಡನ್ನೂ ಜಪ್ತಿ ಮಾಡಲಾಗಿದೆ.


ಪರಿಚಯದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ಆರೋಪಿ, ಮದುವೆಗಾಗಿ ಸಂಗ್ರಹಿಸಿದ್ದ ಚಿನ್ನದ ಆಭರಣಗಳ ಮೇಲಿನ ಆಸೆಯಿಂದಲೇ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಶನಿವಾರ ರಾತ್ರಿ ವೈದ್ಯರ ಮನೆಯಲ್ಲಿ ತಂಗಿದ್ದ ವೇಳೆ ಡಾ. ರಮೇಶ ತಮ್ಮ ಮದುವೆಗಾಗಿ ತಂದಿದ್ದ ಚಿನ್ನದ ಒಡವೆಗಳನ್ನು ತೋರಿಸಿದ್ದೇ ಈ ದಾರುಣ ಘಟನೆಗೆ ಕಾರಣವಾಗಿದೆ.


ನಿದ್ರೆಯಲ್ಲಿದ್ದ ವೇಳೆ ವೈದ್ಯರ ತಲೆಗೆ ಕಬ್ಬಿಣದ ರಾಡಿನಿಂದ ಹೊಡೆದು ಹತ್ಯೆಗೈದ ಆರೋಪಿಯು, ಬಳಿಕ ಆಭರಣ ಹಾಗೂ ನಗದು ತೆಗೆದುಕೊಂಡು ಮನೆಯನ್ನು ಹೊರಗಿನಿಂದ ಬೀಗ ಹಾಕಿ ಪರಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆ ನಡೆದ 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿರುವ ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು, ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ