LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮನೆ ಮನೆಗೆ ಕನ್ನಡ ಬಾವುಟ; ಜೆಡಿಎಸ್ ಹೊಸ ಅಭಿಯಾನ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಜಿದ್ದಿಗೆ ಬಿದ್ದಂತೆ ಮತದಾರರ ಓಲೈಕೆಗೆ ಮುಂದಾಗಿದ್ದು, ಹೊಸ ಹೊಸ ಯೋಜನೆ, ಅಭಿಯಾನದ ಮೂಲಕ ಗಮನ ಸೆಳೆಯುತ್ತಿದ್ದಾರೆ.



ಇದೀಗ ಜೆಡಿಎಸ್ ನಾಯಕರು ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಸಜ್ಜಾಗಿದ್ದು, ನವೆಂಬರ್ 1ರಿಂದ ರಾಜ್ಯಾದ್ಯಂತ 15 ದಿನಗಳ ಕಾಲ ಕನ್ನಡ ಬಾವುಟ ಅಭಿಯಾನ ನಡೆಯಲಿದೆ.



ರಾಷ್ಟ್ರಪ್ರೇಮದ ಜೊತೆಗೆ ರಾಜ್ಯ ಪ್ರೀತಿ ಸಂದೇಶ ಸಾರುವುದೇ ನಮ್ಮ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.



ಹರ್ ಘರ್ ತಿರಂಗಾ ಅಭಿಯಾನದ ಮಾದರಿಯಲ್ಲೇ ಮನೆ ಮನೆಗೂ ಕನ್ನಡ ಬಾವುಟ ಅಭಿಯಾನ ಆರಂಭಿಸಲಾಗುತ್ತಿದೆ. ನವೆಂಬರ. 1 ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಂದಿನಿಂದ ನ.15ರವರೆಗೆ ಮನೆ ಮನೆಗೆ ಕನ್ನಡ ಬಾವುಟ ವಿತರಿಸಲಾಗುವುದು ಎಂದು ಹೇಳಿದ್ದಾರೆ.



ಒಂದೆಡೆ ಕಾಂಗ್ರೆಸ್ ನಿಂದ ಭಾರತ ಜೋಡೋ ಯಾತ್ರೆ ಆರಂಭವಾಗಿದ್ದರೆ ಮತ್ತೊಂದೆಡೆ ಬಿಜೆಪಿಯಿಂದ ಭಾಷೆಯ ಮೇಲೆ ದಬ್ಬಾಳಿಕೆ ಆರಂಭವಾಗಿದೆ. ಹಿಂದಿ ಹೇರಿಕೆಗೆ ಮುಂದಾಗಿದ್ದಾರೆ. ಒಂದು ರಾಷ್ಟ್ರ ಒಂದು ಭಾಷೆ ಎಂಬ ನಿಟ್ಟಿನಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಎಲ್ಲಾ ಭಾಷೆಗಳನ್ನು ನಾಶ ಮಾಡಿ ಒಂದು ಭಾಷೆ ಎಂದು ಮಾಡಲು ಹೊರಟಂತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ದೇಶಕ್ಕೆ ಮಾರಕವಾಗಿವೆ ಎಂದು ವಾಗ್ದಾಳಿ ನಡೆಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ