LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಡಾ. ರಾಜಕುಮಾರ ಬಳಿಕ ಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ

ಬೆಂಗಳೂರು, ಸೆ. 16 : ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಬಹಿರಂಗವಾಗಿ ಪ್ರಶಂಸಿಸುತ್ತ ಬಂದಿರುವ ಹಾಗೂ ಇತ್ತೀಚಿನ ಜೆನ್ ಝಡ್ ಯುವಜನರ ಪ್ರತಿಭಟನೆ ಕುರಿತು ಟೀಕಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಕನ್ನಡದ ಹಿರಿಯ ನಟ ಅನಂತ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 2024ನೇ ಸಾಲಿನ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಡಾ. ರಾಜಕುಮಾರ ಅವರ ಬಳಿಕ ಈ ಪ್ರತಿಷ್ಠಿತ ಗೌರವಕ್ಕೆ ಅನಂತ ನಾಗ್ ಪಾತ್ರರಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅನಂತ ನಾಗ್, ಯುವಜನರ ಪ್ರತಿಭಟನೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂತಹ ಪ್ರತಿಭಟನಾ ಪ್ರವೃತ್ತಿಯನ್ನು ನಗರಗಳಲ್ಲಿ ಹರಡುತ್ತಿರುವ ‘ರೋಗ’ ಎಂದು ಬಣ್ಣಿಸಿದ್ದ ಅವರು, ಪ್ರತಿಭಟನಾನಿರತ ಜೆನ್ ಝಡ್ ಯುವಜನರ ಕ್ಷಮೆಯನ್ನು ಪ್ರಧಾನಿ ನರೇಂದ್ರ ಮೋದಿ ಕೋರಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದರು. ಪ್ರಧಾನಿ ಕ್ಷಮೆ ಕೇಳುವ ಅಗತ್ಯವಿರಲಿಲ್ಲ; ತಾವು ಅವರ ಸ್ಥಾನದಲ್ಲಿದ್ದರೆ ಕ್ಷಮೆ ಕೇಳುತ್ತಿರಲಿಲ್ಲ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು.

ಅವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲೂ ಪ್ರತಿಕ್ರಿಯೆಗೆ ಕಾರಣವಾಗಿದ್ದವು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಎಂ.ಜಿ. ಹೆಗಡೆ ಅವರು ಅನಂತ ನಾಗ್ ಹೇಳಿಕೆಗಳನ್ನು ಟೀಕಿಸಿದ್ದರು. ವಿದ್ಯಾರ್ಥಿಗಳು ಮತ್ತು ಯುವಜನರ ಪ್ರತಿಭಟನೆ ಕುರಿತು ಅವರು ನೀಡಿದ ಹೇಳಿಕೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಪರ-ವಿರೋಧ ಚರ್ಚೆ ನಡೆದಿತ್ತು.

ಇದರ ನಡುವೆಯೇ, ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅನಂತ ನಾಗ್ ಅವರನ್ನು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ರಾಜಕುಮಾರ ಬಳಿಕ ಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಸಮವಸ್ತ್ರದಲ್ಲಿದ್ದ ಪೊಲೀಸರು; ಇಬ್ಬರ ವರ್ಗಾವಣೆಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಣಿಯಬೇಡಿ: ರಾಹುಲ್ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಡಾ. ಜಿ. ಪರಮೇಶ್ವರಶಿಸ್ತು, ಜಾಗೃತಿಯಿಂದ ಗಣೇಶೋತ್ಸವ ಆಚರಿಸಿ: ಮೇಯರ್ ಪ್ರೀತಿ ಕಾಮಕರ್ಆಸ್ತಿ ಹಂಚಿಕೆ ವಿವಾದ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ, ವಕೀಲ ಪುತ್ರಿಯ ಬರ್ಬರ ಹತ್ಯೆಯುಪಿಐ ಶುಲ್ಕ ಜನರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್’: ಸಚಿವ ಶಿವರಾಜ ತಂಗಡಗಿ ಟೀಕೆ‘ವಂದೇ ಮಾತರಂ’ ಪೂರ್ಣ ಹಾಡಿದರೆ ರಾಜೀನಾಮೆ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲುರೈಲ್ವೆ ಯೋಜನೆಗೆ ಭೂಸ್ವಾಧೀನ: ಎಕರೆಗೆ ₹1 ಕೋಟಿ ಪರಿಹಾರಕ್ಕೆ ರೈತರ ಆಗ್ರಹ