LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಕೇಸ್ ಬೆದರಿಕೆ: ಪ್ರತಿಭಟನೆ ವೇಳೆ ಪೊಲೀಸ್ ವರ್ತನೆಗೆ ಆಕ್ರೋಶ

ಮುಂಬೈ, ಜುಲೈ 23: ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹೊಸದಿಲ್ಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದ್ದು, ದೇಶದ ವಿವಿಧ ಭಾಗಗಳಲ್ಲೂ ಹೋರಾಟ ತೀವ್ರಗೊಂಡಿದೆ. ಈ ನಡುವೆ ಮುಂಬೈನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿರುವ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿಭಟನೆಯ ವೇಳೆ ಪೊಲೀಸ್ ವಾಹನದಲ್ಲಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಪೊಲೀಸ್ ಅಧಿಕಾರಿ, "ಮತ್ತೆ ಇಲ್ಲಿ ಕಾಣಿಸಿಕೊಂಡರೆ ನಿಮ್ಮ ಜೇಬಿನಲ್ಲಿ 50 ಗ್ರಾಂ ಡ್ರಗ್ಸ್‌ ಇಟ್ಟು ಪ್ರಕರಣ ದಾಖಲಿಸುತ್ತೇನೆ. ನಿಮ್ಮ ಜೀವನವೇ ಹಾಳಾಗುತ್ತದೆ. ಜಾಮೀನು ಕೂಡ ಸಿಗುವುದಿಲ್ಲ" ಎಂದು ಹಿಂದಿಯಲ್ಲಿ ಬೆದರಿಕೆ ಹಾಕಿರುವುದು ಕೇಳಿಬಂದಿದೆ.

ಆದರೆ, ಈ ವಿಡಿಯೊದ ಸತ್ಯಾಸತ್ಯತೆ, ಅದು ಚಿತ್ರೀಕರಿಸಲಾದ ದಿನಾಂಕ ಅಥವಾ ನಿಖರ ಸ್ಥಳವನ್ನು ಸ್ವತಂತ್ರವಾಗಿ ದೃಢೀಕರಿಸಲು ಸಾಧ್ಯವಾಗಿಲ್ಲ.

ಈ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರ್ಷವರ್ಧನ್ ಸಪ್ಕಾಲ್, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಈ ಮಟ್ಟಕ್ಕೆ ಇಳಿದಿರುವುದು ಪ್ರಜಾಪ್ರಭುತ್ವದ ಮೇಲೆ ಬಿದ್ದ ಕಪ್ಪು ಚುಕ್ಕೆ ಎಂದು ಟೀಕಿಸಿದ್ದಾರೆ.

ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಬುಧವಾರ ಮುಂಬೈನ ವಿವಿಧೆಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಚೆಂಬೂರಿನ ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದ ಬಳಿ ಜಮಾಯಿಸಿದ್ದ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದರು.

ದಾದರ್‌ನ ಶಿವಸೇನಾ ಭವನದ ಎದುರಲ್ಲಿಯೂ ಬೃಹತ್ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ