LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಒಂದೇ ದಿನ ಎಂಟು ಜನರ ಸಾವು; ಸಮಾಧಿ ಮಾಡಲು ಸ್ಥಳವಿಲ್ಲದೇ ಪ್ರತಿಭಟನೆ

ದಾವಣಗೆರೆ: ಒಂದೇ ಗ್ರಾಮದಲ್ಲಿ ಒಂದೇ ದಿನ ವಿವಿಧ ಕಾರಣದಿಂದ ಎಂಟು ಜನರು ಸಾವನ್ನಪ್ಪಿದ್ದರಿಂದ ಅಂತ್ಯಸಂಸ್ಕಾರಕ್ಕೆ ಹೂಳಲು ಜಾಗವಿಲ್ಲದ ಕಾರಣಕ್ಕೆ  ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.



ದಾವಣಗೆರೆಯ ಹೊರ ವಲಯದ ಹೊಸ ಕುಂದುವಾಡದಲ್ಲಿ ಗುರುವಾರ ಒಂದೇ ದಿನ 8 ಜನ ಸಾವನ್ನಪ್ಪಿದ್ದಾರೆ. 3,000 ಜನಸಂಖ್ಯೆ ಹೊಂದಿರುವ ಹೊಸ ಕುಂದುವಾಡ ಗ್ರಾಮದಲ್ಲಿ ಒಂದೇ ದಿನ ಎಂಟು ಜನರು ಮೃತಪಟ್ಟಿದ್ದಾರೆ.



ಮಾರಜ್ಜಿ (60) ಎಂಬುವರು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಸಂತೋಷ್ (32) ಎಂಬಾತ ವಾಂತಿ ಭೇದಿಯಿಂದ, ಈರಮ್ಮ (65) ಜ್ವರದಿಂದ, ಭೀಮಕ್ಕ (60) ವಾಂತಿ ಭೇದಿಯಿಂದ, ಸುನೀಲ (25) ಜ್ವರದಿಂದ, ಶಾಂತಮ್ಮ (65) ವಯೋಸಹಜ ಹಾಗೂ 3 ದಿನದ ಗಂಡು ಮಗು ಉಸಿರಾಟದ ತೊಂದರೆಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ.



ಶವಸಂಸ್ಕಾರ ಮಾಡಲು ಸ್ಮಶಾನ ಇಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು ಸ್ಮಶಾನಕ್ಕಾಗಿ ಆಗ್ರಹಿಸಿ ಹೊಸ ಕುಂದವಾಡದಲ್ಲಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಸ್ಮಶಾನಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಅದ್ದರಿಂದ ಸ್ಮಶಾನಕ್ಕಾಗಿ ಗ್ರಹಿಸಿದ ಇಡೀ ಗ್ರಾಮದ ಜನರಿಂದ ಪ್ರತಿಭಟನೆ ನಡೆಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು