LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಬೆಂಗಳೂರು: ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಎಐಸಿಸಿ ವರಿಷ್ಠ ಹಾಗೂ ಸದಸ್ಯತ್ವ ನೊಂದಣಿ ಉಸ್ತುವಾರಿ ಸುದರ್ಶನ ನಾಚಿಯಪ್ಪನ್ ಸಮ್ಮುಖದಲ್ಲಿ ಆಂತರಿಕ ಚುನಾವಣೆ ನಡೆಯಲಿದೆ.



ಡಿ.ಕೆ.ಶಿವಕುಮಾರ ಎದುರು ಯಾರಾದರೂ ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ.



ಡಿ.ಕೆ.ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೈಲಾ ಪ್ರಕಾರ ಮೂರು ವರ್ಷಕ್ಕೊಮ್ಮೆ ಚುನಾವಣೆ ನಡೆಸಬೇಕಿದೆ.



ನೂತನ ಕೆಪಿಸಿಸಿ ಪದಾಧಿಕಾರಿಗಳು ಆಯ್ಕೆಯಾದಾಗ ಸಂಪ್ರದಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಬೇಕಿದೆ. ಆದರೆ ದಿನೇಶ್ ಗುಂಡೂರಾವ್ ರಾಜಿನಾಮೆ ಬಳಿಕ ಪದಾಧಿಕಾರಿಗಳ ಆಯ್ಕೆ ಮೂಲೆ ಗುಂಪಾಗಿತ್ತು. ಡಿಕೆ ಶಿವಕುಮಾರ ಅಧ್ಯಕ್ಷರಾದ ಬಳಿಕ ಸದಸ್ಯತ್ವ ನೊಂದಣಿಗೆ ಚಾಲನೆ ಸಿಕ್ಕಿದೆ.



ಕೆಪಿಸಿಸಿಗೆ ಹೊಸ ಪದಾಧಿಕಾರಿಗಳು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಚುನಾವಣೆ ಪ್ರಕ್ರಿಯೆ ನಡೆಯಲಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿರುವ ಕಾರಣ ಎಲ್ಲಾ ರಾಜ್ಯಗಳ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ.



ಮೂರು ವರ್ಷಗಳ ಅವಧಿ ಪೂರ್ಣವಾಗದವರನ್ನು ಅಧಿಕಾರದಲ್ಲಿ ಮುಂದುವರಿಸುವ ಚಿಂತನೆ ವರಿಷ್ಠರ ಮಟ್ಟದಲ್ಲಿ ನಡೆದಿದೆ. ವರಿಷ್ಠರ ತೀರ್ಮಾನದ ಪ್ರಕಾರ ಡಿ. ಕೆ. ಶಿವಕುಮಾರ ಇನ್ನೊಂದು ವರ್ಷ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ. ಕಾಂಗ್ರೆಸ್​​ ಶಾಸಕರು, ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ