LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಒತ್ತುವರಿ ತೆರವಿಗೆ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು, ಆ. 29: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆರೆಗಳ ಒತ್ತುವರಿ ತೆರವುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, ಇಲಾಖೆಯ ವ್ಯಾಪ್ತಿಯಲ್ಲಿರುವ ಹಾಗೂ ನಿರ್ವಹಣೆಯಲ್ಲಿರುವ ಕೆರೆಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಿ 10 ದಿನಗಳೊಳಗೆ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಎಷ್ಟು ಕೆರೆಗಳಿವೆ, ಅವುಗಳಲ್ಲಿ ಎಷ್ಟು ಪ್ರದೇಶ ಒತ್ತುವರಿಯಾಗಿದೆ ಹಾಗೂ ಒತ್ತುವರಿ ತೆರವುಗೊಳಿಸಲು ಈವರೆಗೆ ಕೈಗೊಂಡಿರುವ ಕ್ರಮಗಳೇನು ಎಂಬ ವಿವರವನ್ನು ಸಮಗ್ರವಾಗಿ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.

30 ವರ್ಷಗಳ ಭವಿಷ್ಯದ ಅಗತ್ಯ ಗಮನದಲ್ಲಿ

ಮುಂದಿನ 30 ವರ್ಷಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಲಿರುವ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಮೇಲ್ಮೈ ನೀರಿನ ಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಸಲು ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಮುಖ ಸಿಹಿನೀರಿನ ಮೂಲಗಳಾದ ಕೆರೆ ಮತ್ತು ಸರೋವರಗಳ ಸಂರಕ್ಷಣೆ ಅತ್ಯಗತ್ಯವಾಗಿದ್ದು, ಅವುಗಳ ರಕ್ಷಣೆ ಮತ್ತು ಸುಸ್ಥಿರ ನಿರ್ವಹಣೆಗೆ ಆದ್ಯತೆ ನೀಡಬೇಕಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ವಿಶ್ವ ಕೆರೆ ದಿನದಂದು ಸೂಚನೆ

ನಾಗರಿಕತೆಯ ಬೆಳವಣಿಗೆಯಲ್ಲಿ ಕೆರೆಗಳು ಮಹತ್ವದ ಪಾತ್ರ ವಹಿಸಿವೆ. ಭೂಮಿಯ ಮೇಲಿನ ಸಿಹಿನೀರಿನ ಪ್ರಮುಖ ಮೂಲಗಳಾದ ಕೆರೆ ಮತ್ತು ಸರೋವರಗಳ ರಕ್ಷಣೆ, ಸುಸ್ಥಿರ ನಿರ್ವಹಣೆ ಹಾಗೂ ಪರಿಸರ ವ್ಯವಸ್ಥೆಯಲ್ಲಿ ಅವುಗಳ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಆಗಸ್ಟ್ 27ರಂದು ವಿಶ್ವ ಕೆರೆ ದಿನ ಆಚರಿಸಲಾಗುತ್ತದೆ.

ವಿಶ್ವ ಕೆರೆ ದಿನದ ಅಂಗವಾಗಿ ಸಚಿವರು ಈ ಸೂಚನೆ ನೀಡಿದ್ದು, ಗ್ರಾಮೀಣ ಪ್ರದೇಶಗಳ ಕೆರೆಗಳ ಸಂರಕ್ಷಣೆ ಮತ್ತು ಒತ್ತುವರಿ ತೆರವಿಗೆ ಇಲಾಖೆಯಿಂದ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಕ್ಕಮ್ ಪ್ರಕಾಶ ಬೆಳಗಾವಿ, ಭೂಷಣ ಬೊರಸೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ನೇಮಕಮಹಾರಾಷ್ಟ್ರದ ಸರ್ಕಾರಿ ಶಾಲೆಯಲ್ಲಿ ಅವಧಿ ಮೀರಿದ ಆಹಾರ ಪತ್ತೆ₹22,006 ಕೋಟಿ ಸಾಲಕ್ಕೆ ₹6 ಕೋಟಿ ಮರುಪಾವತಿ: ವಿದೇಶಿ ಹೂಡಿಕೆಗೆ ಸುಭಾಷ ಚಂದ್ರ ಸಜ್ಜುಭೂಸ್ವಾಧೀನದಲ್ಲಿ ಮಾನಸಿಕ ನಷ್ಟಕ್ಕೂ ಪರಿಹಾರ ಪಡೆಯುವ ಹಕ್ಕು: ಹೈಕೋರ್ಟನಾಗೇಂದ್ರ ಕಣ್ಣೀರು ಬಿಜೆಪಿಯನ್ನೇ ನಾಶ ಮಾಡಲಿದೆ: ಮಧು ಬಂಗಾರಪ್ಪಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಒತ್ತುವರಿ ತೆರವಿಗೆ ಕ್ರಮ: ಈಶ್ವರ ಖಂಡ್ರೆಬಿಜೆಪಿ ದೇಶದ ಅತಿ ದೊಡ್ಡ ಸಮಸ್ಯೆ: ಅಖಿಲೇಶ ಯಾದವನ್ಯಾಯಾಧೀಶರ ನೇಮಕಾತಿಯಲ್ಲಿ ಕಾರ್ಯಾಂಗದ ಹಸ್ತಕ್ಷೇಪ: ಎಸ್. ಮುರಳೀಧರ ಕಳವಳನೇಪಾಳ: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲ್ಯಾಕ್ಸ ಗೋಪಿ ಸೆಟ್ಟಿ ನಾಪತ್ತೆ₹22,006 ಕೋಟಿ ಸಾಲಕ್ಕೆ ಕೇವಲ ₹6.5 ಕೋಟಿ ಪಾವತಿಗೆ ಬಿಜೆಪಿ ನಿಕಟ ಸುಭಾಷ ಚಂದ್ರಗೆ ಅನುಮತಿ