LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ (ಇಸಿಐ) ಪರಿಷ್ಕರಿಸಿ ವಿಸ್ತರಿಸಿದೆ. ಮತದಾರರಿಗೆ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಲು, ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಹಾಗೂ ಅರ್ಜಿಗಳನ್ನು ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ, ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮನೆ–ಮನೆ ಭೇಟಿ ಮತ್ತು ಪರಿಶೀಲನಾ ಕಾರ್ಯವನ್ನು ಆಗಸ್ಟ್ 8, 2026ರವರೆಗೆ ಮುಂದುವರಿಸಲು ಆಯೋಗ ತೀರ್ಮಾನಿಸಿದೆ. ಈ ಹಿಂದೆ ಜೂನ್ 30ರಿಂದ ಜುಲೈ 29ರವರೆಗೆ ಮಾತ್ರ ಈ ಕಾರ್ಯ ನಡೆಸಲು ನಿಗದಿಪಡಿಸಲಾಗಿತ್ತು. ಈಗ ವಿಸ್ತರಿಸಿದ ಅವಧಿಯಲ್ಲಿ ಬಿಎಲ್‌ಒಗಳು ಮತದಾರರ ಮನೆಗಳಿಗೆ ಭೇಟಿ ನೀಡಿ ಪರಿಶೀಲನಾ ನಮೂನೆಗಳನ್ನು ವಿತರಿಸುವುದರ ಜೊತೆಗೆ ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಲಿದ್ದಾರೆ. ಮತದಾರರ ವಿವರಗಳ ಪರಿಶೀಲನೆ ಹಾಗೂ ಅಗತ್ಯ ದಾಖಲೆಗಳ ದೃಢೀಕರಣವೂ ಇದೇ ಅವಧಿಯಲ್ಲಿ ನಡೆಯಲಿದೆ.

ಈ ಮೊದಲು ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿಗದಿಪಡಿಸಲಾಗಿತ್ತು. ಆದರೆ ಪರಿಷ್ಕೃತ ವೇಳಾಪಟ್ಟಿಯಂತೆ ಈಗ ಆಗಸ್ಟ್ 17, 2026ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಕರಡು ಪಟ್ಟಿ ಪ್ರಕಟವಾದ ನಂತರ ಮತದಾರರು ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪರಿಶೀಲಿಸಬಹುದಾಗಿದೆ.

ಕರಡು ಪಟ್ಟಿ ಪ್ರಕಟಗೊಂಡ ಬಳಿಕ ಆಗಸ್ಟ್ 17ರಿಂದ ಸೆಪ್ಟೆಂಬರ್ 16ರವರೆಗೆ ಸಾರ್ವಜನಿಕರಿಗೆ ಆಕ್ಷೇಪಣೆ ಹಾಗೂ ಹಕ್ಕು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವಿಕೆ, ವಿಳಾಸ ಅಥವಾ ಇತರ ವಿವರಗಳ ತಿದ್ದುಪಡಿ ಸೇರಿದಂತೆ ವಿವಿಧ ಅರ್ಜಿಗಳನ್ನು ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ಕಂಡುಬರುವ ಯಾವುದೇ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಈ ಅವಧಿಯೇ ಪ್ರಮುಖ ಅವಕಾಶವಾಗಲಿದೆ.

ಸಾರ್ವಜನಿಕರಿಂದ ಸಲ್ಲಿಕೆಯಾಗುವ ಆಕ್ಷೇಪಣೆ ಹಾಗೂ ಹಕ್ಕು ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಿದ ಬಳಿಕ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 19, 2026ರಂದು ಅಧಿಕೃತವಾಗಿ ಪ್ರಕಟಿಸಲಾಗುವುದು.

ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ನೋಂದಾಯಿತ ಮತದಾರರಿದ್ದು, ನಕಲಿ ಹೆಸರುಗಳು, ಮರಣ ಹೊಂದಿರುವ ಮತದಾರರ ಹೆಸರುಗಳು ಹಾಗೂ ಶಾಶ್ವತವಾಗಿ ಸ್ಥಳಾಂತರಗೊಂಡಿರುವವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಮತ್ತು ಅರ್ಹ ಹೊಸ ಮತದಾರರನ್ನು ಸೇರ್ಪಡೆಗೊಳಿಸುವ ಉದ್ದೇಶದಿಂದ ಈ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗಿದೆ.

ಚುನಾವಣಾ ಇಲಾಖೆ, ಬೂತ್ ಮಟ್ಟದ ಅಧಿಕಾರಿಗಳು ಮನೆಗೆ ಭೇಟಿ ನೀಡಿದಾಗ ಮತದಾರರು ಅಗತ್ಯ ದಾಖಲೆಗಳನ್ನು ಒದಗಿಸಿ ಸರಿಯಾದ ಮಾಹಿತಿಯನ್ನು ನೀಡುವಂತೆ ಮನವಿ ಮಾಡಿದೆ. ಪರಿಷ್ಕೃತ ವೇಳಾಪಟ್ಟಿಯ ಸದುಪಯೋಗ ಪಡೆದು ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸಿಕೊಳ್ಳುವ ಮೂಲಕ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!ಬೆಳಗಾವಿಯಲ್ಲಿ ಗುಂಡಿನ ದಾಳಿ: ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚನೆಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿಸೋನಮ್ ವಾಂಗಚುಕ್ ಆರೋಗ್ಯ ಗಂಭೀರ; ಬಲವಂತವಾಗಿ ಆಹಾರ ನೀಡುವಂತೆ ದೆಹಲಿ ಹೈಕೋರ್ಟನಲ್ಲಿ ಅರ್ಜಿಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿ