LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಗುಂಡಿನ ದಾಳಿ ಕುರಿತು ಸಂಸತ್‌ನಲ್ಲಿ ಸುಳ್ಳು ಹೇಳಿಕೆ: ಸಚಿವರ ವಿರುದ್ಧ ಹಕ್ಕುಚ್ಯುತಿ ನೋಟಿಸ್

ಹೊಸದಿಲ್ಲಿ, ಜುಲೈ 31: ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆದಿಲ್ಲ ಎಂದು ಲೋಕಸಭೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಹಕ್ಕುಚ್ಯುತಿ ನಿರ್ಣಯ ಮಂಡಿಸಿವೆ.

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ಸದಸ್ಯ ಕೆ.ಸಿ. ವೇಣುಗೋಪಾಲ್ ಅವರು ಶುಕ್ರವಾರ ಲೋಕಸಭೆಯ ಕಾರ್ಯವಿಧಾನ ಮತ್ತು ವ್ಯವಹಾರ ನಿರ್ವಹಣಾ ನಿಯಮ 222ರ ಅಡಿಯಲ್ಲಿ ಈ ಕುರಿತು ನೋಟಿಸ್ ಸಲ್ಲಿಸಿದ್ದು, ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಹಕ್ಕುಚ್ಯುತಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಜುಲೈ 20ರಂದು ನಡೆದ ‘ಸಂಸತ್ ಚಲೋ’ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆದಿದ್ದರೂ, ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಸಚಿವರು ಲೋಕಸಭೆಯಲ್ಲಿ ಹೇಳುವ ಮೂಲಕ ಸದನವನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

ಜುಲೈ 29ರಂದು ‘ಸಾರ್ವಜನಿಕ ಪರೀಕ್ಷೆಗಳು (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ–2026’ ಕುರಿತ ಚರ್ಚೆಗೆ ಉತ್ತರಿಸುತ್ತಾ, “ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಲಾಗಿದೆ. ಅಶ್ರುವಾಯು ಮಾತ್ರ ಬಳಸಲಾಗಿದೆ. ಗುಂಡಿನ ದಾಳಿಯೇ ನಡೆಯದಿದ್ದಾಗ ಆದೇಶದ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಜಿತೇಂದ್ರ ಸಿಂಗ್ ಹೇಳಿದ್ದರು.

ಈ ಹೇಳಿಕೆ ವಾಸ್ತವಾಂಶಗಳಿಗೆ ವಿರುದ್ಧವಾಗಿದೆ ಎಂದು ಕೆ.ಸಿ. ವೇಣುಗೋಪಾಲ್ ತಮ್ಮ ನೋಟಿಸ್‌ನಲ್ಲಿ ವಾದಿಸಿದ್ದು, ಸಂಸತ್ತಿಗೆ ತಪ್ಪು ಮಾಹಿತಿ ನೀಡುವುದು ಹಕ್ಕುಚ್ಯುತಿ ಹಾಗೂ ಸದನದ ಅವಮಾನಕ್ಕೆ ಸಮಾನವಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ತಮ್ಮ ಸಾಮಾಜಿಕ ಜಾಲತಾಣದ ಸಂದೇಶದಲ್ಲಿ ಕೆ.ಸಿ. ವೇಣುಗೋಪಾಲ್, ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ಕುರಿತು ಸಂಸತ್ತಿನಲ್ಲಿ "ಯಾವುದೇ ಗುಂಡಿನ ದಾಳಿ ನಡೆದಿಲ್ಲ" ಎಂದು ಸಚಿವರು ಬಹಿರಂಗವಾಗಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಧ್ಯಮಗಳ ಎದುರೇ ಪೆಲೆಟ್ ಗನ್ ದಾಳಿಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಭೇಟಿಯಾಗಿ ಮಾತನಾಡಿರುವುದನ್ನು ಉಲ್ಲೇಖಿಸಿದ ಅವರು, ಘಟನೆಗೆ ಸಂಬಂಧಿಸಿದ ಸಾಕಷ್ಟು ದೃಶ್ಯ ಹಾಗೂ ಸಾಕ್ಷ್ಯಗಳು ಲಭ್ಯವಿದ್ದರೂ ಸಚಿವರು ಸದನವನ್ನು ದಾರಿ ತಪ್ಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಭವಿಗಳಿಂದ ಹೊಸ ಮುಖಗಳವರೆಗೆ: ಸಚಿವ ಸಂಪುಟ ಸೇರಿದ 19 ಶಾಸಕರ ರಾಜಕೀಯ ಪಯಣಮಳೆ ಅಬ್ಬರಕ್ಕೆ ರಾಜ್ಯ ತತ್ತರ : ಜಲಾಶಯಗಳು ಭರ್ತಿ, ನದಿ-ಹಳ್ಳಗಳು ಅಪಾಯದ ಮಟ್ಟಕ್ಕೆಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವುಗೋವಾದಲ್ಲಿ ಹೊಸ ಕಟ್ಟುನಿಟ್ಟಿನ ನಿಯಮ: ಈ ತಪ್ಪು ಮಾಡಿದರೆ ₹1 ಲಕ್ಷದವರೆಗೆ ದಂಡಗರ್ಭಪಾತ ಜಾಲದ ಬೆಚ್ಚಿಬೀಳಿಸುವ ಸತ್ಯ: ‘ಗಂಡು ಮಗು’ ಔಷಧಿ ಹೆಸರಿನಲ್ಲಿ ವಂಚನೆ"ನಾನೂ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ": ಅಸಮಾಧಾನಿತ ಶಾಸಕರಿಗೆ ಡಿ.ಕೆ.ಶಿವಕುಮಾರ ಸಮಾಧಾನಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ ರಾಮಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ : ಸಂಸತ್ ಆವರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ