LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಅವರಾದಿ ಗ್ರಾಪಂ ಕಚೇರಿಯಲ್ಲಿ ತಂದೆ-ಮಗಳ ಹತ್ಯೆ: ಮೂವರು ಆರೋಪಿಗಳ ಬಂಧನ

ಬೆಳಗಾವಿ, ಸೆ. 19 : ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಂದೆ-ಮಗಳನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಿತ್ತೂರು ಪೊಲೀಸರು ಬಂಧಿಸಿದ್ದಾರೆ. ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಮಡಿವಾಳಪ್ಪ ಕುಂದರಗಿ ಬಂಧಿತ ಆರೋಪಿಗಳು.

ಸೆ. 16ರಂದು ಬೆಳಗ್ಗೆ 11.15ರ ಸುಮಾರಿಗೆ ಧಾರವಾಡ ನಿವಾಸಿ, ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ (26) ಆಸ್ತಿ ನಂ.135ಕ್ಕೆ ಸಂಬಂಧಿಸಿದ ಹೆಸರು ದಾಖಲಾತಿ ಅರ್ಜಿಯ ವಿಚಾರಣೆಗಾಗಿ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದರು. ಈ ವೇಳೆ ಆಸ್ತಿ ವಿಚಾರವಾಗಿ ಆರೋಪಿಗಳು ಅವರೊಂದಿಗೆ ಗಲಾಟೆ ನಡೆಸಿ, ಕೊಡಗೋಲು ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ರುದ್ರಪ್ಪ ಹಾಗೂ ಶಶಿಕಲಾ ಸ್ಥಳದಲ್ಲೇ ಮೃತಪಟ್ಟಿದ್ದರು.

ಗಲಾಟೆ ಬಿಡಿಸಲು ಮುಂದಾದ ರಾಹುಲ್ ಎಂಬುವವರ ಮೇಲೆಯೂ ಆರೋಪಿಗಳು ಕೊಡಗೋಲಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದರು.

ಪ್ರಕರಣದ ಗಂಭೀರತೆ ಪರಿಗಣಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಹೆಚ್ಚುವರಿ ಎಸ್ಪಿ ಆರ್.ಬಿ. ಬಸರಗಿ ಹಾಗೂ ಬೈಲಹೊಂಗಲ ಡಿವೈಎಸ್‌ಪಿ ಡಾ. ವೀರಯ್ಯ ಹಿರೇಮಠ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶಿವಾನಂದ ಬಿ. ಗುಡಗನಟ್ಟಿ, ಪಿಎಸ್‌ಐ ಭರತ್ ಎಸ್., ಪಿಎಸ್‌ಐ ಜಿ.ಜಿ. ಹಂಪಣ್ಣವರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆ.18ರಂದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲೆಯ ಮೆಟ್ಟಿಲಿನಲ್ಲಿ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವುಹಾವೇರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ₹3.43 ಕೋಟಿ ದಂಡಕನಿಷ್ಠ ವೇತನ ಜಾರಿಗೆ ತಡೆ ನೀಡಿದ್ದ ಸುತ್ತೋಲೆಗಳಿಗೆ ಹೈಕೋರ್ಟ ತಡೆಅನಾರೋಗ್ಯದ ಹಿನ್ನೆಲೆ ಕೆಎಲ್‌ಇ ಆಸ್ಪತ್ರೆ ಉದ್ಘಾಟನೆಗೆ ಅಮಿತ ಶಾ ಗೈರುಅವರಾದಿ ಗ್ರಾಪಂ ಕಚೇರಿಯಲ್ಲಿ ತಂದೆ-ಮಗಳ ಹತ್ಯೆ: ಮೂವರು ಆರೋಪಿಗಳ ಬಂಧನಮಮತಾ ಬೆಂಬಲ ಘೋಷಿಸಿದ ಕೆಲವೇ ಗಂಟೆಗಳಲ್ಲಿ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನಮೋದಿ ಜನ್ಮದಿನವನ್ನು ‘ನಿರುದ್ಯೋಗ ದಿನ’ವಾಗಿ ಆಚರಿಸಿ ಕಾಂಗ್ರೆಸ್ ಪ್ರತಿಭಟನೆಐಫೋನ್ 18 ಪ್ರೊ ಮಾರಾಟ ಆರಂಭ; ಆ್ಯಪಲ್ ಮಳಿಗೆಗಳ ಮುಂದೆ ಗ್ರಾಹಕರ ಸಾಲುನಿಥಾರಿ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಸುರೇಂದ್ರ ಕೋಲಿ ಶವವಾಗಿ ಪತ್ತೆ‘ಅಂಬಾರಿ’ಯಲ್ಲಿ ಸಿಎಂ, ಸಚಿವರ ಮೆರವಣಿಗೆ