LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೌಟುಂಬಿಕ ಕಲಹಕ್ಕೆ ಬೇಸತ್ತು  ಮಗನೊಂದಿಗೆ ನದಿಗೆ ಹಾರಿದ ಮಹಿಳೆ 

ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಎರಡು ವರ್ಷದ ಮಗನೊಂದಿಗೆ ನದಿಗೆ ಹಾರಿ ಮಹಿಳೆಯೊಬ್ಬಳು ಕಣ್ಮರೆಯಾದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಳೇ ಫೂಲ್ ಬಳಿ ನಡೆದಿದೆ.



ರುದ್ರವ್ವ ಬಸವರಾಜ ಬನ್ನೂರು (30) ಮತ್ತು ಆಕೆಯ ಪುತ್ರ ಶಿವಲಿಂಗಪ್ಪ ಬನ್ನೂರ (2) ನಾಪತ್ತೆಯಾದವರು.



ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರುದ್ರವ್ವ ತನ್ನ ಎರಡು ವರ್ಷದ ಪುತ್ರನ ಜೊತೆಗೆ ಇಡಗುಂಡಿಯಲ್ಲಿನ ತವರು ಮನೆಯಲ್ಲಿ ವಾಸವಿದ್ದಳು. ಆಕೆಯನ್ನು ಮನವೊಲಿಸಿದ್ದ ಬಸವರಾಜ ಆಕೆಯನ್ನು ರಾಮದುರ್ಗಕ್ಕೆ ಕರೆದುಕೊಂಡು ಬಂದಿದ್ದ. ಈ ವೇಳೆ ಆಟೋ ಬಾಡಿಗೆ ಕೊಡಲು ಬಸವರಾಜ ಚಿಲ್ಲರೆ ತರಲು ಹೋದಾಗ ಎರಡು ವರ್ಷದ ಪುತ್ರನ ಜೊತೆಗೆ ರುದ್ರವ್ವ ವೆಂಕಟೇಶ್ವರ ದೇವಸ್ಥಾನದ ಬಳಿ ಇರುವ ಹಳೆ ಫೂಲ್ ನಿಂದ ನದಿಗೆ ಹಾರಿದ್ದಾಳೆ.



ತಾಯಿ-ಮಗು ನದಿಗೆ ಹಾರಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ರಾಮದುರ್ಗ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ತಾಯಿ-ಮಗುವಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ