LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೊದಲ ಬಾರಿ ‌ನಾಡವಿರೋಧಿ ಮಹಾಮೇಳಕ್ಕೆ ನಿರ್ಬಂಧ; ಸರಕಾರದ ಸ್ತುತ್ಯ ಕಾರ್ಯ

ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿಯ 'ಮಹಾಮೇಳ' ಕ್ಕೆ ಅನುಮತಿ ನಿರಾಕರಿಸುವ ಮೂಲಕ ರಾಜ್ಯದ ಇತಿಹಾಸದಲ್ಲೇ ಬಸವರಾಜ ಬೊಮ್ಮಾಯಿ ಸರಕಾರ ಸ್ತುತ್ಯ ಕಾರ್ಯ ಮಾಡಿದೆ.



ಕಳೆದ ವಾರ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದ ಸಮಿತಿಗೆ ಸೋಮವಾರದ ವರೆಗೂ ಯಾವುದೇ ಕ್ರಮ ಜರುಗಿದ ಕುರಿತು ಮಾಹಿತಿಯಿರಲಿಲ್ಲ. ಪ್ರತಿ ಬಾರಿಯಂತೆ ಈ ಬಾರಿಯೂ ಮಹಾಮೇಳಕ್ಕೆ ಅನುಮತಿ ಸಿಗುವುದೆಂದು ಎಂಇಎಸ್ ಸಭೆಗೆ ವೇದಿಕೆ ನಿರ್ಮಿಸಿ ಸಕಲ ವ್ಯವಸ್ಥೆ ಮಾಡಿಕೊಂಡಿತ್ತು. ಆದರೆ ಸೋಮವಾರ ಮುಂಜಾನೆ ಅನುಮತಿ ನೀಡಿಲ್ಲ ಎಂಬ ಮಾಹಿತಿ ನೀಡಲಾಯಿತು.



ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮತ್ತು ಕರ್ನಾಟಕ ವಿರೋಧಿ ಭಾಷಣ ಬಿಗಿಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಕ್ಕೆ ಕೊನೆ ಘಳಿಗೆಯಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದು, ಇಂದು ನಡೆಯಬೇಕಿದ್ದ ನಾಡವಿರೋಧಿ ಮಹಾಮೇಳ ರದ್ದುಗೊಂಡಿದೆ.



ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಮಹಾಮೇಳದ ವೇದಿಕೆಯನ್ನು ತೆರವುಗೊಳಿಸಲಾಯಿತು. ಎಡಿಜಿಪಿ ಅಲೋಕ ಕುಮಾರ ಹಾಗೂ ಬೆಳಗಾವಿ ನಗರ ಡಿಸಿಪಿ ರವೀಂದ್ರ ಗಡಾದಿ ಸ್ಥಳಕ್ಕೆ ಭೇಟಿ ನೀಡಿ ವೇದಿಕೆಯನ್ನು ತೆರವುಗೊಳಿಸಿದರು. ಯಾವುದೇ ಸಭೆ ಸಮಾರಂಭ ಆಯೋಜಿಸದಂತೆ ತಾಕೀತು ಮಾಡಿದರು. ನಗರದ ಹಲವು ಪ್ರದೇಶಗಳಲ್ಲಿ ಸೋಮವಾರ ಕಲಾಂ 144 ನಿಷೇಧಾಜ್ಞೆ ಜಾರಿ ಮಾಡಿದ್ದರಿಂದ ಸಭೆ, ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ. ಹೀಗಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಕ್ಕೆ ತಡೆ ಬಿದ್ದಂತಾಗಿದೆ.



ಮಾಧ್ಯಮದವರೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ ಕುಮಾರ ಅವರು, ಮಹಾರಾಷ್ಟ್ರ ಏಕೀಕರಣ ಸಮಿತಿಯವರು ಮರಾಠಿ ಮೇಳ ಆಯೋಜಿಸಲು ನಿರ್ಧರಿಸಿದ್ದರು. ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ತಡೆಯಲು ಈ ಮೇಳಕ್ಕೆ ಅನುಮತಿ ನಿರಾಕರಿಸಲಾಗಿದೆ. ಅನುಮತಿ ಕೋರಿ ಎಂಇಎಸ್ ಮುಖಂಡರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿ ಅನುಮತಿ ನಿರಾಕರಿಸಲಾಗಿದೆ ಎಂದು ತಿಳಿಸಿದರು.



ಕನ್ನಡಿಗರ ವಿರೋಧದ ನಡುವೆಯೂ ಎಂಇಎಸ್‌ ಗೆ ಕೊನೆ ಘಳಿಗೆಯಲ್ಲಿ ಸರಕಾರ ಅನುಮತಿ ನೀಡುತ್ತಿತ್ತು, ವಿಧಿಸಿದ ಕಟ್ಟಲೆಗಳನ್ನು ಮೀರಿ, ಕರ್ನಾಟಕ ವಿರೋಧಿ ಚಟುವಟಿಕೆಗಳು ಪ್ರತಿವರ್ಷ ನಡೆದರೂ ಯಾವುದೇ ಕ್ರಮ ಜರುಗಿಸುತ್ತಿರಲಿಲ್ಲ. ಆದರೆ ಮೊದಲ ಭಾರಿ ಅನುಮತಿ ನಿರಾಕರಿಸುವ ಮೂಲಕ ಸರಕಾರ ಬದ್ಧತೆ ತೋರಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ