LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾರಿಗೆ ಬೆಂಕಿ: ಸುಟ್ಟು ಕರಕಲಾದ ಮಾಜಿ ಶಾಸಕರ ಪುತ್ರ, ಕೊಲೆ ಶಂಕೆ 

ಧಾರವಾಡ, ಮಾ.24 : ಜಿಲ್ಲೆಯ ರಾಮಾಪುರ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರು ಕಾರಿನಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮೇಲ್ನೋಟಕ್ಕೆ ಇದು ಪೂರ್ವಯೋಜಿತ ಕೊಲೆ ಎಂಬ ಶಂಕೆ ವ್ಯಕ್ತವಾಗಿದ್ದು, ಜಿಲ್ಲಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ಸಮೀಪ ಇರುವ ರೈಲು ಹಳಿ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.


ಮಧ್ಯಾಹ್ನ ಸುಮಾರು 2:30ರ ಸುಮಾರಿಗೆ ಕಾರೊಂದು ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ, ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.


ಮೃತ ವ್ಯಕ್ತಿ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದ ನಿವಾಸಿ ರಾಜು ಬೋಳಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರರಾಗಿದ್ದಾರೆ. ರಾಜು ಅವರು ತಮ್ಮ ಕಾರಿನಲ್ಲಿಯೇ ಸುಟ್ಟು ಹೋಗಿದ್ದು, ದೇಹವನ್ನು ಗುರುತಿಸಲಾಗದಷ್ಟು ಬೆಂಕಿ ಆವರಿಸಿತ್ತು.


ಘಟನಾ ಸ್ಥಳವು ಅತ್ಯಂತ ನಿರ್ಜನ ಪ್ರದೇಶವಾಗಿದ್ದು, ದುಷ್ಕರ್ಮಿಗಳು ರಾಜು ಅವರನ್ನು ಇಲ್ಲಿಗೆ ಕರೆತಂದು ಕೊಲೆ ಮಾಡಿ ನಂತರ ಸಾಕ್ಷ್ಯ ನಾಶಪಡಿಸಲು ಕಾರಿನಲ್ಲೇ ಶವಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.


ವಿಷಯ ತಿಳಿಯುತ್ತಿದ್ದಂತೆಯೇ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಹಾಗೂ ಶ್ವಾನದಳವನ್ನು ಕರೆಯಿಸಿಕೊಂಡು ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST