LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಅಮೇರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್, ಜುಲೈ 14: ಅಮೇರಿಕದ ಮಾಜಿ ಅಧ್ಯಕ್ಷ ಡೊನಾಲ್ಡ ಟ್ರಂಪ್ ಮೇಲೆ ಪೆನ್ಸಿಲ್ವೇನಿಯಾದ ಚುನಾವಣೆ ಪ್ರಚಾರ ಸಭೆಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಟ್ರಂಪ್ ಗಾಯಗೊಂಡಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.



ಟ್ರಂಪ್ ಅವರ ಕಿವಿಗೆ ತಾಗಿದ ಆ ಗುಂಡು ಪಕ್ಕಕ್ಕೆ ಜಾರಿ ಹೋಗಿದೆ. ಗುಂಡು ತಗುಲಿದ ಪರಿಣಾಮ ಟ್ರಂಪ್ ಕಿವಿ ಮತ್ತು ಮುಖದ ತುಂಬಾ ರಕ್ತ ಹರಿದಾಡಿದೆ. ಆಗ ಭದ್ರತಾ ಸಿಬ್ಬಂದಿ ಸುತ್ತುವರಿದು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಟ್ರಂಪ್ ಅವರ ಜೀವಕ್ಕೆ ಈಗ ಯಾವುದೇ ಅಪಾಯ ಇಲ್ಲ ಎಂದು ತಿಳಿಸಲಾಗಿದೆ. ಟ್ರಂಪ್‌ ಕಿವಿ ಮತ್ತು ಮುಖದ ಮೇಲೆ ಗಾಯವಾಗಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.



ಶಂಕಿತ ಬಂದೂಕುಧಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ತಿಳಿಸಿದೆ.



ಅಮೆರಿಕ ಅಧ್ಯಕ್ಷರ ಹುದ್ದೆಗೆ 81 ವರ್ಷದ ಜೋ ಬೈಡನ್ ವಿರುದ್ಧ 78 ವರ್ಷದ ಟ್ರಂಪ್ ಸ್ಪರ್ಧಿಸಿದ್ದಾರೆ. ಹೀಗಾಗಿ ಇಬ್ಬರ ನಡುವೆ ತುರುಸಿನ ಸ್ಪರ್ಧೆ ಇದೆ. ಆದರೆ ಇಂತಹ ಸಮಯದಲ್ಲೇ ಅನಾಮಿಕರ ಗುಂಡಿನ ದಾಳಿ ಅಮೆರಿಕದಲ್ಲಿ ಸಂಚಲನ ಸೃಷ್ಟಿ ಮಾಡಿದೆ.



ಘಟನೆ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿಕೆ ನೀಡಿದ್ದು, ಅಮೆರಿಕನ್ನರು ಈ ಘಟನೆಯಿಂದಾಗಿ ವಿಚಲಿತರಾಗಬೇಡಿ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಹೀಗಾಗಿ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ