LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪಾರ್ಕನಲ್ಲಿ ಕುಳಿತಿದ್ದವಳನ್ನು ಹೊತ್ತೊಯ್ದು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ನಾಲ್ವರ ಬಂಧನ

ಬೆಂಗಳೂರು: ಸ್ನೇಹಿತನೊಂದಿಗೆ ಪಾರ್ಕನಲ್ಲಿ ಕುಳಿತಿದ್ದ ಯುವತಿಯನ್ನು ಕಾರ್‌ ನಲ್ಲಿ ಬಲವಂತದಿಂದ ಕರೆದೊಯ್ದು ಚಲಿಸುವ ಕಾರಿನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.



ಮಾರ್ಚ 25ರಂದು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್‌ನಲ್ಲಿ ಸಂತ್ರಸ್ತ ಯುವತಿಯು ಸ್ನೇಹಿತನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಳು. ಈ ವೇಳೆ ರಾತ್ರಿ ಇಬ್ಬರೂ ಪಾರ್ಕ್‌ನಲ್ಲಿ ಕುಳಿತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆರೋಪಿಗಳು, ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಯುವತಿಯನ್ನು ಎಳೆದೊಯ್ದಿದ್ದರು. ಬೆಳಗಳೂರು ನಗರದಲ್ಲಿ ಹಲವೆಡೆ ಕಾರಿನಲ್ಲಿ ಸುತ್ತಾಡಿಸುತ್ತ ಚಲಿಸುತ್ತಿದ್ದ ಕಾರಿನಲ್ಲೇ ಆರೋಪಿಗಳು ಅತ್ಯಾಚಾರ ಮಾಡಿರುವುದಾಗಿ ಯುವತಿ ದೂರು ನೀಡಿದ್ದಾಳೆ ಎಂದು ಕೋರಮಂಗಲ ಪೊಲೀಸರು ತಿಳಿಸಿದ್ದಾರೆ.



ಸಾಮೂಹಿಕ ಅತ್ಯಾಚಾರದ ಬಳಿಕ ಬಂಧಿತ ಆರೋಪಿಗಳಾದ ಸತೀಶ, ವಿಜಯ, ಶ್ರೀಧರ ಹಾಗೂ ಕಿರಣ ಆರೋಪಿಗಳು ಸಂತ್ರಸ್ತೆಯನ್ನು ಮನೆ ಬಳಿ ಬಿಟ್ಟು ಹೋಗಿದ್ದರು. ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆ ನಾಲ್ವರೂ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ಹೇಳಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ